ಸುಳ್ಯ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ: ಭವಿಷ್ಯದಲ್ಲಿ ಪತ್ರಿಕೋದ್ಯಮ ಹಾದಿ ಬದಲಾಗಲಿದೆ: ಮಹೇಶ್‌ ಪುಚ್ಚಪ್ಪಾಡಿ

ಸುಳ್ಯ: ಪತ್ರಿಕೋದ್ಯಮ ನಡೆಸುವುದು ಸವಾಲಿನ ವೃತ್ತಿಯಾಗಿದೆ ಎಂದು ಪತ್ರಕರ್ತ ಮಹೇಶ್‌ ಪುಚ್ಚಪ್ಪಾಡಿ ಹೇಳಿದರು .
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯು ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿರುವ ರಂಗಮಯೂರಿ ಕಲಾಶಾಲೆಯ ಸಭಾಭವನದಲ್ಲಿ ಜು.29ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆಧುನಿಕ ಕಾಲದಲ್ಲಿ ಪತ್ರಿಕೋದ್ಯಮದ ಸ್ಥಿತಿ ಬದಲಾಗುತ್ತಿದೆ. ಈ ಕ್ಷೇತ್ರ ಡಿಜಿಟಲ್ ಮಾಧ್ಯಮವಾಗಿ ಮುಂದಡಿ ಇಡುತ್ತಿದೆ.ಈ ನಿಟ್ಟಿನಲ್ಲಿ ಮುಂದಿನ ಕೆಲವೇ ವರ್ಷಗಳಲ್ಲಿ ಪತ್ರಿಕೋದ್ಯಮದ ಚಿತ್ರಣ ಬದಲಾಗಲಿದೆ ಎಂದು ಮಹೇಶ್‌ ಪುಚ್ಚಪ್ಪಾಡಿ ಅಭಿಪ್ರಾಯಪಟ್ಟರು.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಉಮೇಶ್ ಮಣಿಕ್ಕಾರ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನಲ್ಲಿ ಪತ್ರಕರ್ತೆ, ಲೇಖಕಿಯಾಗಿರುವ ಹೇಮಾ ವೆಂಕಟ್ ಮೋಂಟಡ್ಕ, ಪತ್ರಿಕಾ ವಿತರಕ ಪ್ರಭಾಕರ ಕಳಂಜ ಅವರನ್ನು ಜರ್ನಲಿಸ್ಟ್ ಯೂನಿಯನ್ ವತಿಯಿಂದ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಸುಳ್ಯದ ಸಿ.ಡಿ.ಪಿ.ಒ. ರಶ್ಮಿ ಅಶೋಕ್ ನೆಕ್ರಾಜೆ, ಬೆಳ್ಳಾರೆ ವಾಣಿಜ್ಯ ವರ್ತಕರ, ಕೈಗಾರಿಕಾ ಸಂಘದ ಅಧ್ಯಕ್ಷ ಮಾಧವ ಗೌಡ, ರಂಗಮಯೂರಿಯ ಲೋಕೇಶ್ ಊರುಬೈಲು ಮಾತನಾಡಿದರು. ದ.ಕ. ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಹರೀಶ್ ಬಂಟ್ವಾಳ ಅಭಿನಂದನಾ ಭಾಷಣ ಮಾಡಿದರು. ಸುಳ್ಯ ತಾಲೂಕು ಘಟಕದ ಕಾರ್ಯದರ್ಶಿ ಯಶ್ವಿತ್ ಕಾಳಮ್ಮನೆ, ಖಜಾಂಜಿ ಶ್ರೀಧರ ಕಜೆಗದ್ದೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಳ್ಯ ಘಟಕದ ಗೌರವಾಧ್ಯಕ್ಷ ಶರೀಫ್ ಜಟ್ಟಿಪಳ್ಳ ಸ್ವಾಗತಿಸಿದರು

Related posts

ದಬ್ಬಡ್ಕ: ಅಕ್ರಮ ಮರ ಕಡಿದ ಪ್ರಕರಣ, ಮೂವರ ಬಂಧನ

ನೂತನ ಸ್ಪೀಕರ್ ಯು.ಟಿ ಖಾದರ್ ಅವರನ್ನು ಅಭಿನಂದಿಸಿದ ಡಾ. ಡಿ.ವಿ.ಲೀಲಾಧರ್

ಸುಳ್ಯ: ಕಾಲು ಜಾರಿ ಕೆರೆಗೆ ಬಿದ್ದು ಮಹಿಳೆ ಮೃತ್ಯು..! ಇಲ್ಲಿದೆ ಸಂಪೂರ್ಣ ಮಾಹಿತಿ