ನ್ಯೂಸ್ ನಾಟೌಟ್: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಸೇನೆ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಶೇಷ ಎಂದರೆ ಸಿಎಂ ಸಿದ್ದರಾಮಯ್ಯ ಹಣೆಗೆ ಸಿಂಧೂರ ಇಟ್ಟುಕೊಂಡು ಬಂದು, ಇದು ಗಾಂಧಿ, ಬಸವಣ್ಣನ ಕಾಲವಲ್ಲ, ಈಗ ಕಾಲ ಬದಲಾಗಿದೆ. ಅವರು ಕಾಲು ಕೆರೆದು ಜಗಳಕ್ಕೆ ಬಂದರೆ ಸುಮ್ಮನೆ ಇರಲು ಆಗುತ್ತಾ ಎಂದು ಹೇಳಿದ್ದಾರೆ.
ಇನ್ನೂ, ಇದೇ ವೇಳೆ ಸುದ್ದಿಗೋಷ್ಟಿಯಲ್ಲಿ ಸಿಂಧೂರ ಇಟ್ಟುಕೊಂಡು ಬಂದಿರೋ ಬಗ್ಗೆ ಪ್ರಶ್ನೆ ಕೇಳಲಾಯಿತು. ಅದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಹಾಗೇನೂ ಇಲ್ಲ, ಇಲ್ಲಿಗೆ ಬರುವ ಮೊದಲು ಪಟಾಲಮ್ಮ ದೇವಾಲಯಕ್ಕೆ ಹೋಗಿದ್ದೆ. ಅಲ್ಲಿ ದೇವರ ದರ್ಶನ ಮಾಡಿದ ನಂತರ ಸಿಂಧೂರ ಇಟ್ಟುಕೊಂಡು ಬಂದಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
ಈ ಬಗ್ಗೆ ಮಾತಾಡಿದ ಸಿಎಂ, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ದ ಅವರನ್ನು ಛೂ ಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ. ಈ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್ ನಲ್ಲಿ ನಡೆದ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ. ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ ಎಂದಿದ್ದಾರೆ.
#WATCH | Bengaluru: On #OperationSindoor, Karnataka CM Siddaramaiah says, “…In 9 places, Indian Army has attacked terrorists’ sites…no other places were attack, no innocent people in Pakistan were attacked. this step comes in the wake of barbaric Pahalgam attack…we support… pic.twitter.com/cnVTLH7rHz
— ANI (@ANI) May 7, 2025
ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ ಎಂದಿದ್ದಾರೆ.
ಸಿಂಧೂರ ಅಳಿಸಿದವರಿಗೆ ಮಹಿಳಾ ಅಧಿಕಾರಿಗಳಿಂದಲೇ ಉತ್ತರ..! ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಪತ್ರಿಕಾಗೋಷ್ಠಿ
‘ಅಭಿ ಪಿಕ್ಚರ್ ಬಾಕಿ ಹೈ’ ಎಂದ ಮಾಜಿ ಸೇನಾ ಮುಖ್ಯಸ್ಥ..! ಮನೋಜ್ ನರವನೆ ಯುದ್ಧದ ಸುಳಿವು ಕೊಟ್ಟರಾ..?