ನ್ಯೂಸ್ ನಾಟೌಟ್: ”ಸೇನಾ ಗುರಿಗಳ ಮೇಲೆ ಯಾವುದೇ ದಾಳಿ ನಡೆದರೆ ಸೂಕ್ತ ಪ್ರತಿಕ್ರಿಯೆ ನೀಡಲಾಗುತ್ತದೆ” ಎಂದು ಭಾರತ ಮತ್ತೆ ಸುದ್ದಿಗೋಷ್ಠಿ ನಡೆಸಿ ಪುನರುಚ್ಚರಿಸಿದೆ. ಪಾಕ್ ಹುಟ್ಟುತ್ತಲೇ ಸುಳ್ಳಿಂದ ಹುಟ್ಟಿದ ದೇಶ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಹೇಳಿದ್ದಾರೆ.
ಪಾಕಿಸ್ಥಾನದ ಉಗ್ರರ ವಿರುದ್ಧ ಆಪರೇಷನ್ ಸಿಂದೂರ್ ಅನ್ನು ಮುನ್ನಡೆಸಿದ್ದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಯುದ್ಧ ಸಮವಸ್ತ್ರದಲ್ಲಿ ವಿದೇಶಾಂಗ ಸಚಿವಾಲಯದಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರೊಂದಿಗೆ ಇಂದಿನ ಬೆಳವಣಿಗೆಗಳ ಬಗ್ಗೆ ಬ್ರೀಫಿಂಗ್ ನೀಡಿದರು.
ಗುರುವಾರ ಬೆಳಗ್ಗೆ ಭಾರತದ ಭೂಪ್ರದೇಶದ ಮೇಲೆ ಪಾಕಿಸ್ಥಾನ ಸೇನೆ ನಡೆಸಿದ ಕ್ಷಿಪಣಿ ದಾಳಿಯನ್ನು ಭಾರತೀಯ ಸಶಸ್ತ್ರ ಪಡೆಗಳು ವಿಫಲಗೊಳಿಸಿವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಲಾಯಿತು.
ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ಥಾನ ನಡೆಸಿದ ನಿರಂತರ ಶೆಲ್ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 16 ಮಂದಿ ಭಾರತೀಯ ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 59 ಮಂದಿ ಗಾಯಗೊಂಡಿದ್ದಾರೆ ಎಂದು ವಿವರ ನೀಡಿದ್ದಾರೆ.
#WATCH | Delhi: Wing Commander Vyomika Singh says, “Pakistan has increased the intensity of its unprovoked firing across the Line of Control using Mortars and heavy calibre Artillery in areas in Kupwara, Baramulla, Uri, Poonch, Mendhar and Rajouri sectors in Jammu and Kashmir. 16… pic.twitter.com/6ahtrYriiC
— ANI (@ANI) May 8, 2025
ಪಾಕಿಸ್ಥಾನವು ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲೂಧಿಯಾನ, ಆದಂಪುರ, ಭಟಿಂಡಾ, ಚಂಡೀಗಢ, ನಲ್, ಫಲೋಡಿ, ಉತ್ತರಲೈ ಮತ್ತು ಭುಜ್ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಭಾರತದ ಹಲವಾರು ಮಿಲಿಟರಿ ಗುರಿಗಳ ಮೇಲೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಿ ದಾಳಿ ಮಾಡಲು ಪ್ರಯತ್ನಿಸಿದೆ. ಅವುಗಳನ್ನು ಇಂಟಿಗ್ರೇಟೆಡ್ ಕೌಂಟರ್ ಯುಎಎಸ್ ಗ್ರಿಡ್ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳಿಂದ ತಟಸ್ಥಗೊಳಿಸಲಾಗಿದೆ. ಈ ದಾಳಿಯ ಅವಶೇಷಗಳನ್ನು ಈಗ ಪಾಕಿಸ್ಥಾನದ ದಾಳಿಯನ್ನು ಸಾಬೀತುಪಡಿಸುವ ಹಲವಾರು ಸ್ಥಳಗಳಿಂದ ವಶಪಡಿಸಿಕೊಳ್ಳಲಾಗುತ್ತಿದೆ” ಎಂದು ಕರ್ನಲ್ ಸೋಫಿಯಾ ಖುರೇಷಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.
ಭಾರತದ ದಾಳಿಯಿಂದ ನಮ್ಮನ್ನು ದೇವರೇ ಕಾಪಾಡಬೇಕು ಎಂದು ಪಾಕ್ ಸಂಸತ್ ನಲ್ಲಿ ಕಣ್ಣೀರಿಟ್ಟ ಸಂಸದ..! ಇಲ್ಲಿದೆ ವಿಡಿಯೋ