ನ್ಯೂಸ್ ನಾಟೌಟ್: ಹಾಲಿನ ದರ, ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ಬಿಜೆಪಿ ಸಜ್ಜಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯದ ಮೂಲೆ ಮೂಲೆಯಲ್ಲಿ ಪ್ರತಿಭಟನೆ ನಡೆಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಇಪ್ಪತ್ತು ತಿಂಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಬೆಲೆ ಏರಿಕೆ ನಿರಂತರವಾಗಿದೆ. ಸಾಮಾನ್ಯ ಜನರಿಗೆ ಬರೆ ಎಳೆಯುವ ಕೆಲಸವಾಗುತ್ತಿದೆ. ದುಬಾರಿ ಜೀವನವನ್ನು ನಾಡಿನ ಜನ ನಡೆಸುವ ದುಸ್ಥಿತಿ ಕಾಂಗ್ರೆಸ್ ಸರ್ಕಾರ ನಿರ್ಮಾಣ ಮಾಡಿದೆ.
ಉಸಿರಾಡುವ ಗಾಳಿ ಬಿಟ್ಟರೆ ಉಳಿದ ಎಲ್ಲವೂ ಬೆಲೆ ಏರಿಕೆ ನಿರಂತರವಾಗಿದೆ. ಮತದಾರರಿಗೆ ವರದಾನ ಆಗುವ ಬದಲು ಸರ್ಕಾರ ಶಾಪಗ್ರಸ್ಥವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ವಿದ್ಯುತ್ ದರ ಏಪ್ರಿಲ್ 1ರಿಂದ ಪ್ರತಿ ಯೂನಿಟ್‌ಗೆ 36 ಪೈಸೆ ಜಾಸ್ತಿ ಮಾಡಿದ್ದಾರೆ. ಹಾಲಿನ ದರ ನಾಲ್ಕು ರೂಪಾಯಿ ಜಾಸ್ತಿ ಮಾಡಿದ್ದಾರೆ. ಈಗಾಗಲೇ ಮೂರನೇ ಬಾರಿ ಜಾಸ್ತಿ ಮಾಡುತ್ತಿದ್ದಾರೆ. ಆಸ್ಪತ್ರೆಗಳಲ್ಲೂ ಚಿಕಿತ್ಸೆ ದರ ಜಾಸ್ತಿ ಮಾಡಿದ್ದಾರೆ. ಬಡವರು, ಗ್ರಾಮೀಣ ಭಾಗದಲ್ಲಿ ಸರ್ಕಾರಿ ಆಸ್ಪತ್ರೆಗೆ ಹೋಗುವ ಜನರಿಗೂ ಬರೆ ಎಳೆಯುತ್ತಿದೆ. ಅಫಿಡವಿಟ್, ಮುದ್ರಾಂಕ ಶುಲ್ಕ, ವೃತ್ತಿಪರ ತೆರಿಗೆ, ಬಸ್ ದರ ಜಾಸ್ತಿ ಮಾಡಿದ್ದಾರೆ.
ರಾಜ್ಯದ ಜನತೆಯ ಮೇಲೆ ಬೆಲೆ ಏರಿಕೆಯ ಹೊರೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಡೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ಆರಂಭವಾಗಲಿದೆ ಎಂದು ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.
ಬೀದಿ ನಾಯಿಯನ್ನು ಮುದ್ದಾಡಲು ಹೋದ ವಾಚ್ ಮ್ಯಾನ್ ಗೆ ಕಾದಿತ್ತು ಅಪಾಯ..! ಸಿಸಿಟಿವಿ ವಿಡಿಯೋ ವೈರಲ್
ದುಬೈನಿಂದ ಭಾರತಕ್ಕೆ ಅಂಡರ್ ವಾಟರ್ ರೈಲ್ವೆ..! ಹೇಗಿರಲಿದೆ ಎರಡು ದೇಶಗಳ ನಡುವಿನ ರೈಲ್ವೆ ಮಾರ್ಗ..?