Latestಕ್ರೈಂರಾಜಕೀಯರಾಜ್ಯ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಇನ್ನೊಬ್ಬ ವ್ಯಕ್ತಿ ಅರೆಸ್ಟ್..! ಭಾರತ-ಪಾಕ್ ಸಂಘರ್ಷದ ಬಳಿಕ ಕರ್ನಾಟಕದಲ್ಲಿ ಇದು 6ನೇ ಪ್ರಕರಣ..!

525

ನ್ಯೂಸ್ ನಾಟೌಟ್: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಾಗೂ ಸೇನಾ ಘರ್ಷಣೆ ನಡೆದ ಬೆನ್ನಲ್ಲೇ ಕರ್ನಾಟಕದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗುವುದು, ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಸಂದೇಶ ಪ್ರಕಟಿಸುವಂಥ ಪ್ರಕರಣಗಳು ಹೆಚ್ಚಾಗತೊಡಗಿವೆ. ಇದೀಗ ರಾಯಚೂರಿನಲ್ಲಿ ವ್ಯಕ್ತಿಯೊಬ್ಬ ಪ್ರಧಾನಿ ನರೇಂದ್ರ ಮೋದಿ ಮತ್ತು ರಫೇಲ್ ಯುದ್ಧವಿಮಾನ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಸಂದೇಶ ಪ್ರಕಟಿಸಿದ್ದಾನೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಪೊಲೀಸರು ಆರೋಪಿ ಅಜ್ಮೀರ್‌ ನನ್ನು (37) ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಚಕ್ಕಡಿ ಮೇಲೆ ಅಳುತ್ತಾ ಕುಳಿತುಕೊಂಡಿರುವ ಪ್ರಧಾನಿ ಮೋದಿ, ಅದರ ಮೇಲೆ ರಫೇಲ್ ಯುದ್ಧ ವಿಮಾನವನ್ನು ಸಾಗಿಸುತ್ತಿರುವ ಚಿತ್ರವುಳ್ಳ ಪೋಸ್ಟ್ ಅನ್ನು ಅಜ್ಮೀರ್ ಪ್ರಕಟಿಸಿದ್ದ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿರುವ ತುರ್ವಿಹಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಲ್ಮಾ ಪಠಣಕ್ಕೆ ಸಬಂಧಿಸಿದ ಬರಹದ್ದು ಎನ್ನಲಾದ ಕರಪತ್ರಗಳನ್ನು ಕೆಲವರು ಕಾಲಿನಿಂದ ಒದೆಯುತ್ತಿರುವ ವಿಡಿಯೋ ಪೋಸ್ಟ್ ಮಾಡಿದ್ದ ಆರೋಪಿ, ‘ಕಲ್ಮಾಗೆ ಅವಮಾನ ಮಾಡಿದರೆ ನಾನು ಜೀವ ಕೊಡುವುದಕ್ಕೂ ಸಿದ್ಧನಿದ್ದೇನೆ. ಜೀವ ತೆಗೆಯಲೂ ಸಿದ್ಧನಿದ್ದೇನೆ’ ಎಂದು ಪೋಸ್ಟ್​ ಮಾಡಿದ್ದ. ‘ನಮ್ಮವರೇ ಆದರೇನು, ಬೇರೆಯವರು ಆದರೇನು, ಜಗತ್ತಿನಲ್ಲಿ ಬೇರೆ ಯಾರ ಜೊತೆಗೆ ಬೇಕಾದರೂ ಪ್ರತೀಕಾರ ತೆಗೆದುಕೊಳ್ಳಿ. ಆದರೆ ಕಲ್ಮಾ ಜೊತೆ ಅಲ್ಲ. ಕಲ್ಮಾಗೆ ಅವಮಾನ ಮಾಡಿದರೆ ಜೀವ ತೆಗೆಯಲು ಸಿದ್ಧನಿದ್ದೇನೆ’ ಎಂದು ಆರೋಪಿ ವಿಡಿಯೋದಲ್ಲಿ ಹೇಳಿದ್ದ. ತಕ್ಷಣವೇ ಪೊಲೀಸರು ಆತನ ವಿರುದ್ಧ ಕ್ರಮ ಕೈಗೊಂಡಿದ್ದರು.

ಪಾಕ್ ಭಾರತ ಸಂಘರ್ಷದ ಬಳಿಕ ಕರ್ನಾಟಕದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ, ಧರ್ಮಗಳ ನಡುವೆ ದ್ವೇಷ ಹುಟ್ಟಿಸುವಂತಹ ಪೋಸ್ಟ್ ಮಾಡಿದ ಹಾಗೂ ಪ್ರಧಾನಿ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರನೇ ಪ್ರಕರಣ ಇದಾಗಿದೆ.

ಭಾರತದಲ್ಲಿ ಪಾಕ್ ಧ್ವಜ, ಸರಕುಗಳ ಮಾರಾಟ ನಿಲ್ಲಿಸುವಂತೆ ಇ-ಕಾಮರ್ಸ್ ಕಂಪನಿಗಳಿಗೆ ಕೇಂದ್ರ ಎಚ್ಚರಿಕೆ..! ಇಲ್ಲಿದೆ ಸಂಪೂರ್ಣ ಮಾಹಿತಿ

‘ಐಡಿಬಿಐ’ನಿಂದ 676 ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

See also  Police Bus: ಮಧ್ಯರಾತ್ರಿ ಕಮಿಷನರ್ ಕಚೇರಿ ಆವರಣದಲ್ಲೇ ಬಸ್ ಕದ್ದ ಕಳ್ಳ..! ಮಲಗಿದ್ದ ಕಾನ್ಸ್ಟೇಬಲ್ ಸಮೇತ ಬಸ್ ಕಳವಿಗೆ ಯತ್ನ..! ಇಲ್ಲಿದೆ ಚಾಲಾಕಿ ಕಳ್ಳನ ಕಥೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget