ಸುಳ್ಯ

ಅರಂತೋಡು: ಕ್ರಮಬದ್ಧ ಜೀವನಶೈಲಿ ಯಶಸ್ಸಿನ ಸೂತ್ರ: ಪ್ರಾಂಶುಪಾಲ ದಾಮೋದರ ಕಣಜಾಲು

ನ್ಯೂಸ್ ನಾಟೌಟ್ : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ ಆ. 4 ಅರಂತೋಡು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಡಾ. ಶಿವರಾಮ ಕಾರಂತ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ದಾಮೋದರ ಕಣಜಾಲು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ‘ಕ್ರಮಬದ್ಧವಾದ ಜೀವನಶೈಲಿ ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಕಾಲೇಜಿನ ಸಂಚಾಲಕ ರಾಷ್ಟ್ರ ಪ್ರಶಸ್ತಿ ಪುರಸ್ಕತ ಶಿಕ್ಷಕ ಕೆ. ಆರ್ ಗಂಗಾಧರ್ ಮಾತನಾಡಿ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದರೊಂದಿಗೆ, ಚಲನಾಶೀಲರಾಗಿರಬೇಕು.

ಸಮಾಜದಲ್ಲಿ ಧೈರ್ಯದಿಂದ ಬದುಕುವುದನ್ನು ಎನ್ಎಸ್ಎಸ್ ಕಲಿಸುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ರಮೇಶ್ ವಹಿಸಿದ್ದರು. ನಿಕಟಪೂರ್ವ ಕಾರ್ಯಕ್ರಮಾಧಿಕಾರಿ ಗೌರಿಶಂಕರ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮಾಧಿಕಾರಿ ಲಿಂಗಪ್ಪ ಎಂ. ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬಹುನಿರೀಕ್ಷಿತ ಅರಂತೋಡು-ಎಲಿಮಲೆ ರಸ್ತೆ ಅಭಿವೃದ್ದಿಗೆ ಗುದ್ದಲಿಪೂಜೆ,ಒಂದು ವಾರದೊಳಗೆ 3 ಕೋಟಿ ವೆಚ್ಚದಲ್ಲಿ ಕಾಮಗಾರಿ ಶುರು

ಸುಳ್ಯ : ಮಾರ್ಚ್ 7 ರಂದು (ನಾಳೆ) ವಿದ್ಯುತ್ ವ್ಯತ್ಯಯ

ಸುಳ್ಯ:ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ ;ಗಣ್ಯರು ಹೇಳಿದ್ದೇನು? ಇಲ್ಲಿದೆ ರಿಪೋರ್ಟ್‌..