ನ್ಯೂಸ್ ನಾಟೌಟ್: ಆನ್ಲೈನ್ ಗೇಮಿಂಗ್ ಆ್ಯಪ್ ಮೂಲಕ ಪರಿಚಯವಾದ ಪ್ರಿಯಕರನಿಗಾಗಿ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.
ಗ್ರೇಟರ್ ನೋಯ್ಡಾದಲ್ಲಿರುವ ಕೃಷ್ಣ ಆಸ್ಪತ್ರೆಯಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಸೀಮಾ ಹೈದರ್ ಆನ್ ಲೈನ್ ಗೇಮಿಂಗ್ ಮೂಲಕ ಸಚಿನ್ ಎಂಬುವವರನ್ನು ಭೇಟಿಯಾಗಿದ್ದರು, ಬಳಿಕ ಅವರ ಸ್ನೇಹ ಪ್ರೀತಿಗೆ ಚಿಗುರಿತ್ತು.
ಸೀಮಾಗೆ ಆಗಲೇ ಮದುವೆಯಾಗಿ ನಾಲ್ಕು ಮಕ್ಕಳಿದ್ದರು. ಪ್ರೀತಿಸಿದವನಿಗಾಗಿ ಸೀಮಾ ಗಂಡನನ್ನು ಬಿಟ್ಟು ಮಕ್ಕಳನ್ನು ಕರೆದುಕೊಂಡು ಭಾರತಕ್ಕೆ ಬಂದಿದು ಸಚಿನ್ ನನ್ನು ಮದುವೆಯಾಗಿದ್ದಳು.
ಕಳೆದ ವರ್ಷ ತಾನು ಗರ್ಭಿಣಿಯಾಗಿರುವ ಬಗ್ಗೆ ಸೀಮಾ ವಿಡಿಯೋ ಮೂಲಕ ಹೇಳಿಕೊಂಡಿದ್ದರು. ಇದು ಅವರಿಬ್ಬರ ಹೊಸ ಅಧ್ಯಾಯವೆಂದೇ ಹೇಳಲಾಗಿತ್ತು. ಪ್ರಸ್ತುತ ಗ್ರೇಟರ್ ನೋಯ್ಡಾದ ರಬುಪುರದಲ್ಲಿ ವಾಸಿಸುತ್ತಿರುವ ಈ ದಂಪತಿ ಸಂತೋಷದ ಜೀವನ ನಡೆಸುತ್ತಿದ್ದಾರೆ.
ಇಬ್ಬರೂ ಆನ್ ಲೈನ್ ಗೇಮ್ ಪಬ್ಜಿ ಆಡುವಾಗ ಪರಿಚಯವಾದರು. ಇಬ್ಬರು ಪರಸ್ಪರ ಪ್ರೀತಿಸಿ. ಎಲ್ಲಾ ಅಡೆತಡೆಗಳನ್ನು ಧಿಕ್ಕರಿಸಿ, ಸೀಮಾ ಸಚಿನ್ ಜತೆ ಇರಲು ನೇಪಾಳದ ಮೂಲಕ ಅಕ್ರಮವಾಗಿ ಭಾರತವನ್ನು ದಾಟಿ ನಾಲ್ಕು ಮಕ್ಕಳನ್ನು ಕರೆದುಕೊಂಡು ಬಂದಿದ್ದಳು. 2023ರ ಜುಲೈನಲ್ಲಿ ಕಾನೂನು ಹೋರಾಟಗಳು ಮತ್ತು ಬಂಧನವನ್ನು ಎದುರಿಸಬೇಕಾಯಿತು.
ಇದನ್ನೂ ಓದಿ: ಇನ್ನುಮುಂದೆ ಐಫೋನ್ ಗಳಲ್ಲಿ ಚಾರ್ಜಿಂಗ್ ಪೋರ್ಟ್ ಯೇ ಇರೋದಿಲ್ಲ..! ಈ ಬಗ್ಗೆ ಕಂಪನಿ ಹೇಳಿದ್ದೇನು..?