ಕ್ರೈಂ

ಮಂಗಳೂರು: ಪಬ್ಲಿಕ್ ಟಿವಿ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ, ಆರೋಪಿ ಅರೆಸ್ಟ್

900

ಮಂಗಳೂರು: ಪಬ್ಲಿಕ್ ಟಿವಿ ವರದಿಗಾರೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವರದಿಗಾರರಾಗಿರುವ ಸುಖ್ ಪಾಲ್ ಪೊಳಲಿ ಅವರ ಮೇಲೆ ವಕೀಲ ಯದುನಂದನ್ ಎನ್ನುವವರು ಸೋಮವಾರ ಸಂಜೆ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ತಲೆಗೆ ಪೆಟ್ಟು ಬಿದ್ದ ಸುಖ್ ಪಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಯದುನಂದನ್ ಮೇಲೆ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ವೈಯಕ್ತಿಕ ವಿಚಾರದ ದ್ವೇಷ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಕಠಿಣ ಕಾನೂನು ಕ್ರಮಕ್ಕೆ ಪತ್ರಕರ್ತರ ಸಂಘದ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ, ಜಿಲ್ಲಾ ವರದಿಗಾರರಾಗಿರುವ ಸುಖಪಾಲ್ ಪೊಳಲಿ ಅವರ ಮೇಲೆ ಕಳೆದ ರಾತ್ರಿ ಮಾರಣಾಂತಿಕ ಹಲ್ಲೆ ಯನ್ನು ಖಂಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಈ ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ರನ್ನು ಇಂದು ಭೇಟಿ ಮಾಡಿ ತಪ್ಪಿತಸ್ಥತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಲಿದೆ, ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ಚಲಿಸುತ್ತಿದ್ದ ಕಾರಿನ ಟಯರ್ ಸ್ಫೋಟ, ಕಾರು ಪಲ್ಟಿ
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget