ಕ್ರೈಂವಿಡಿಯೋವೈರಲ್ ನ್ಯೂಸ್

ಕಾಲೇಜಿನಲ್ಲೇ ಯುವಕ-ಯುವತಿಯ ಲವ್ವಿ ಡವ್ವಿ, ವಿಡಿಯೋ ವೈರಲ್ ಪ್ರಕರಣಕ್ಕೆ ಟ್ವಿಸ್ಟ್! ವಿದ್ಯಾರ್ಥಿಗಳಿಬ್ಬರೂ ಆತ್ಮಹತ್ಯೆಗೆ ಶರಣು!

298

ನ್ಯೂಸ್ ನಾಟೌಟ್: ದಾವಣಗೆರೆ ನಗರದ ಪದವಿ ಕಾಲೇಜೊಂದರ ಕಟ್ಟಡದ ಟೆರೆಸ್‌ ಮೇಲೆ ಕಳೆದಿದ್ದ ಖಾಸಗಿ ಕ್ಷಣಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದರಿಂದ ಮನನೊಂದು ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಡಿಯೊ ಬಹಿರಂಗವಾಗಿರುವ ವಿಚಾರ ತಿಳಿದು ಆತಂಕಗೊಂಡಿದ್ದ ವಿದ್ಯಾರ್ಥಿನಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಕೆಯ ಪ್ರಿಯಕರ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
‘ವಿದ್ಯಾರ್ಥಿಗಳಿಬ್ಬರ ಪಾಲಕರು ಪತ್ಯೇಕವಾಗಿ ದೂರು ನೀಡಿದ್ದು, ಅವುಗಳ ಆಧಾರದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಆರಂಭಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಅರುಣ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಲೇಜಿನಲ್ಲೇ ಯುವಕ-ಯುವತಿಯ ಲವ್ವಿ ಡವ್ವಿ, ವಿಡಿಯೋ ವೈರಲ್ , ಸರಸ ಸಲ್ಲಾಪದಲ್ಲಿದ್ದ ಜೋಡಿಯ ವಿಡಿಯೋ ಮಾಡಿದ ವಿದ್ಯಾರ್ಥಿಗಳು

ಯುವಕ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಇವರು ಎರಡು ತಿಂಗಳ ಹಿಂದೆ ಕಾಲೇಜಿನ ಕಟ್ಟಡದ ಟೆರೆಸ್‌ ಮೇಲೆ ಖಾಸಗಿ ಕ್ಷಣ ಕಳೆಯುತ್ತಿರುವುದನ್ನು ಕೆಲವರು ಬೇರೆ ಕಟ್ಟಡದಲ್ಲಿ ಕುಳಿತು ನೋಡಿದ್ದರು. ಆ ದೃಶ್ಯಗಳನ್ನು ತಮ್ಮ ಮೊಬೈಲ್‌ ಕ್ಯಾಮೆರಾದ ಮೂಲಕ ಚಿತ್ರೀಕರಿಸಿದ್ದರು. ಆ ವಿಡಿಯೊ ಶುಕ್ರವಾರ ಬೆಳಿಗ್ಗೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು ಮತ್ತು ಎಲ್ಲೆಡೆ ಸುದ್ದಿಯಾಗಿತ್ತು ಇದರಿಂದ ಮನನೊಂದು ವಿದ್ಯಾರ್ಥಿಗಳು ಕೊನೆಯುಸಿರೆಳೆದಿದ್ದಾರೆ.

See also  ಕಾರ್ಕಳ: ಯುವತಿಯರನ್ನು ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಸಿ ಹಣ ಪಡೆಯುತ್ತಿದ್ದ ವ್ಯಕ್ತಿ..! ಕದ್ರಿ ಠಾಣೆ ಪೊಲೀಸರಿಂದ ಅರೆಸ್ಟ್..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget