ಶಿಕ್ಷಣ

ಪಿಯುಸಿ ಪರೀಕ್ಷೆಯಲ್ಲಿ ಫೇಲ್, ಹಾಸ್ಟೆಲ್ ರೂಂ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ!

217

ನ್ಯೂಸ್‌ ನಾಟೌಟ್‌ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ಶುಕ್ರವಾರ ನಡೆದಿದೆ.

ವಿಜಯಲಕ್ಷ್ಮಿ (18) ಚಾಮರಾಜನಗರದ ಜೆಎಸ್ ಎಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೃತ ಪಟ್ಟಿದ್ದು, ಪಿಸಿಎಂಸಿ ವಿಷಯ ತೆಗೆದುಕೊಂಡಿದ್ದ ಈ ವಿದ್ಯಾರ್ಥಿನಿ ಅಂತಿಮ ಪರೀಕ್ಷಾ ಫಲಿತಾಂಶದಲ್ಲಿ ಫೇಲಾದ ವಿಷಯ ತಿಳಿದು, ನಗರದ ಜೆಎಸ್ ಎಸ್ ಹಾಸ್ಟೆಲ್ ನ ರೂಂ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿ ತಿಳಿಸಿದೆ.

ಈಕೆ ಗುಂಡ್ಲುಪೇಟೆ ತಾಲೂಕಿನ ಮೂಡುಗೂರು ಗ್ರಾಮದ ಮಹೇಶ್ ಎಂಬುವರ ಪುತ್ರಿಯಾಗಿದ್ದು, ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

See also  ಸುಳ್ಯ: NMC ಕಾಲೇಜಿನ ಸಮಾಜ ಕಾರ್ಯ ವಿಭಾಗದ ಹಾಗೂ ಗ್ರಾಮ ಪಂಚಾಯತ್ ಅರಂತೋಡು ಸಹಯೋಗದೊಂದಿಗೆ "ಡಿಜಿಟಲ್ ಸಾಕ್ಷರತೆ ಕಾರ್ಯಕ್ರಮ", ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಂದ ಸದುಪಯೋಗ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget