ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್‌ಗೆ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ವರದಿಯಾಗಿದೆ. ಉಗ್ರರು ಅಡಗಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಇಂದು ಬೆಳಗ್ಗೆ ನಮೀಬಿಯನ್ ಮತ್ತು ಮಾರ್ಸರ್ ಅರಣ್ಯ ಪ್ರದೇಶ ಹಾಗೂ ದಾಚಿಗಾಂ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದವು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೇನಾಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ನಂತರ ಪ್ರತಿ ದಾಳಿ ನಡೆಸಿದ ಸೇನಾ ಪಡೆ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.