ಬೆಂಗಳೂರು: ಪುನೀತ್ ರಾಜಕುಮಾರ್ ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿ, ಬಹಳ ಗಂಭೀರ ಪರಿಸ್ಥಿತಿಯಲ್ಲಿದ್ದಾರೆ ಎಂದು ವಿಕ್ರಮ್ ಆಸ್ಪತ್ರೆಯ ವೈದ್ಯರು ಹೇಳಿಕೆ ನೀಡಿದ್ದಾರೆ. ‘ಇಂದು ಬೆಳಗ್ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯೊಂದಕ್ಕೆ ತೆರಳಿ ಅಲ್ಲಿ ಚಿಕಿತ್ಸೆ ಪಡೆದಿದ್ದರು. ಇಸಿಜಿ ಮಾಡಿಸಿಕೊಂಡು ವಿಕ್ರಂ ಆಸ್ಪತ್ರೆಗೆ ಬಂದಿದ್ದರು. ಅವರು ಗಂಭೀರವಾಗಿದ್ದರು. ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಅವರ ಆರೋಗ್ಯದ ಬಗ್ಗೆ ಏನನನ್ನೂ ಹೇಳಲು ಸಾಧ್ಯವಿಲ್ಲ,‘ ಎಂದು ವೈದ್ಯರು ತಿಳಿಸಿದರು. ‘ಹೃದಯಾಘಾತಕ್ಕೆ ನೀಡಬೇಕಾದ ಚಿಕಿತ್ಸೆಗಳನ್ನು ನೀಡಿದ್ದೇವೆ. ನಾವು ಈಗಲೂ ನಮ್ಮ ಪ್ರಯತ್ನ ಮಾಡುತ್ತಿದ್ದೇವೆ. ಅವರ ಪರಿಸ್ಥಿತಿ ತೀರ ಗಂಭೀರವಾಗಿದೆ. ಇನ್ನೂ ಕೆಲವೇ ಸಮಯದಲ್ಲಿ ಅವರ ಆರೋಗ್ಯದ ಬಗ್ಗೆ ಮತ್ತೊಮ್ಮೆ ಮಾಹಿತಿ ನೀಡಲಾಗುವುದು’ ಎಂದು ಹೇಳಿದರು.
next post