ಕರಾವಳಿಪುತ್ತೂರುರಾಜಕೀಯ

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರನ್ನು ಭೇಟಿಯಾದ ಪುತ್ತಿಲ ಪರಿವಾರ ನಾಯಕರು..!ಕರಾವಳಿಯ ರಾಜಕೀಯದಲ್ಲಿ ಗರಿಗೆದರಿದ ಕುತೂಹಲ

220

ನ್ಯೂಸ್ ನಾಟೌಟ್ : ಕರ್ನಾಟಕ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ನೇಮಕಗೊಂಡಿದ್ದಾರೆ. ಇವರಿಗೆ ಹಲವು ಮಂದಿ ಶುಭಾಶಯಗಳನ್ನು ಹೇಳುತ್ತಿದ್ದಾರೆ. ಇದೀಗ ಪುತ್ತೂರಿನ ‘ಪುತ್ತಿಲ ಪರಿವಾರ’ನಾಯಕರು ಕೂಡ ಶಿವಮೊಗ್ಗದ ನಿವಾಸಕ್ಕೆ ತೆರಳಿ ಬಿವೈ ರಾಘವೇಂದ್ರ ಅವರನ್ನು ಭೇಟಿ ಮಾಡಿದರು.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸಿಡಿದೆದ್ದ’ಪುತ್ತಿಲ ಪರಿವಾರ’ ನಾಯಕರು ಇದೀಗ ವಿಜಯೇಂದ್ರರನ್ನು ಭೇಟಿ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸುವಂತೆ ಮಾಡಿದೆ.

ಭೇಟಿ ವೇಳೆ ವಿಜಯೇಂದ್ರರಿಗೆ ಪುತ್ತೂರು ಮಹಾಲಿಂಗೇಶ್ವರ ದೇವರ ಬೆಳ್ಳಿಯ ಸ್ಮರಣಿಕೆ ನೀಡಿ ನಾಯಕರು ಗೌರವಿಸಿದ್ದಾರೆ . ಇದೇ ಸಂದರ್ಭದಲ್ಲಿ ಕೆಲ ಕಾಲ ಪುತ್ತೂರಿನ ವಿದ್ಯಮಾನಗಳ ಬಗ್ಗೆ ವಿಜಯೇಂದ್ರ ಅವರಿಗೆ ಪುತ್ತಿಲ ಪರಿವಾರದವರು ಮಾಹಿತಿ ನೀಡಿದರು . ಈ ಸಂದರ್ಭದಲ್ಲಿ ವಿಜಯೇಂದ್ರ ಅವರು ಪುತ್ತೂರು ವಿದ್ಯಮಾನಗಳ ಬಗ್ಗೆ ಮಾಹಿತಿ ಇದೆ ಎಂದರು . 

ಪುತ್ತಿಲ ನಾಯಕರು ಅರುಣ್ ಪುತ್ತಿಲಗೆ ಬಿಜೆಪಿಯಲ್ಲಿ ಸ್ಥಾನಮಾನಗಳ ಬಗ್ಗೆ ಚರ್ಚೆಗೆ ಮುಂದಾಗಿದ್ದರೂ ಸದ್ಯಕ್ಕೆ ಆ ಬಗ್ಗೆ ವಿಜಯೇಂದ್ರ ಅವರು ಹೆಚ್ಚು ಚರ್ಚೆ ನಡೆಸದೇ ಮುಂದಿನ ದಿನಗಳಲ್ಲಿ ಈ ಬಗ್ಗೆ ಗಮ‌ನ ಹರಿಸೋ ಭರವಸೆ ನೀಡಿದ್ದಾರೆನ್ನಲಾಗಿದೆ. ಸದ್ಯ ದ.ಕ ಲೋಕಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರೋ ಅರುಣ್ ಪುತ್ತಿಲ ಅವರು ಅರುಣ್ ಪುತ್ತಿಲ ಅನುಪಸ್ಥಿತಿಯಲ್ಲಿ ವಿಜಯೇಂದ್ರರನ್ನು ಪುತ್ತಿಲ ಪರಿವಾರದ ನಾಯಕರು ಭೇಟಿ ಮಾಡಿದ್ದಾರೆ . ಸದ್ಯದಲ್ಲೇ ಅರುಣ್ ಪುತ್ತಿಲ ಸಹ ವಿಜಯೇಂದ್ರ ಅವರನ್ನು ಭೇಟಿಯಾಗಲಿದ್ದಾರೆ ಎಂದು ಪರಿವಾರದ ನಾಯಕರು ತಿಳಿಸಿದ್ದಾರೆ. ಭೇಟಿ ವೇಳೆ ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನದ ಬಗ್ಗೆಯೂ ಚರ್ಚೆ ನಡೆಸಲಾಗಿದ್ದು, ಪುತ್ತಿಲ ಪರಿವಾರದ ನಡೆ ಭಾರೀ ಕುತೂಹಲ ಕೆರಳಿಸಿದೆ.  

ಕಳೆದ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಡ್ಡು ಹೊಡೆದು ಚುನಾವಣೆಗೆ ಪುತ್ತಿಲ ಪರಿವಾರ ಸ್ಪರ್ಧಿಸಿತ್ತು. ಆದರೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕವಾಗ್ತಿದ್ದಂತೆ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಭಾರೀ ಸಂಚಲನ ಸೃಷ್ಟಿಸಿದೆ.

See also  ಪಹಲ್ಗಾಮ್ ಉಗ್ರ ದಾಳಿಯಲ್ಲಿ ಸಿಲುಕಿದ್ದ 178 ಕನ್ನಡಿಗರು ಬೆಂಗಳೂರಿಗೆ ವಾಪಸ್..! ಸ್ಥಳೀಯ ಕಾಶ್ಮೀರಿಗರು ನಮಗೆ ಅತ್ಯುತ್ತಮ ಆತಿಥ್ಯ ನೀಡಿದರು ಎಂದ ಕನ್ನಡಿಗರು..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget