ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯವೈರಲ್ ನ್ಯೂಸ್

ಪುತ್ತೂರು ಮತ್ತು ಬೆಳ್ತಂಗಡಿಗೆ ಬರಲಿದ್ದಾರೆ ಅಣ್ಣಾಮಲೈ ಮತ್ತು ಬಿ.ವೈ ವಿಜಯೇಂದ್ರ, ಇಲ್ಲಿದೆ ಸಂಪೂರ್ಣ ಮಾಹಿತಿ

215

ನ್ಯೂಸ್ ನಾಟೌಟ್: ಲೋಕಸಭಾ ಚುನಾವಣಾ ಹಿನ್ನಲೆ ಮಂಗಳೂರು ನಗರದಲ್ಲಿ ಒಂದು ಸುತ್ತಿನ ಮನೆ ಮನೆ ಸಂಪರ್ಕ ಆಗಿದೆ. ಇದೀಗ ಇನ್ನೊಂದು ಸುತ್ತಿನ ಮನೆ ಮನೆ ಸಂಪರ್ಕ ಸಿದ್ಧತೆ ನಡೆಸಿದ್ದಾರೆ.

ಅದಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ವಿಜೆಯೇಂದ್ರ ಹಾಗೂ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಚಾರಕ್ಕೆ ಬರಲಿದ್ದಾರೆ ಎನ್ನಲಾಗಿದೆ. ಏಪ್ರಿಲ್‌ 20 ರಂದು ಬಿವೈ ವಿಜಯೇಂದ್ರ ಬೆಳ್ತಂಗಡಿ ಮತ್ತು ಬಂಟ್ವಾಳದಲ್ಲಿ ಪ್ರಚಾರ ಸಭೆ ನಡೆಸಲಿದ್ದು, 22ರಂದು ಅಣ್ಣಾಮಲೈ ಮಂಗಳೂರು ಮತ್ತು ಪುತ್ತೂರಿಗೆ ತೆರಳಿ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎನ್ನಲಾಗಿದೆ. ಜಿಲ್ಲೆಯಲ್ಲಿ ಒಟ್ಟು 61 ಕಡೆ ಸಾರ್ವಜನಿಕ ಸಭೆ ಆಯೋಜಿಸಲಾಗಿದ್ದು, ಎಪ್ರಿಲ್‌ 19 ರಂದು ನಗರದಲ್ಲಿ ವಕೀಲರ ಸಮಾವೇಶ ನಡೆಯಲಿದ್ದು ಅದರಲ್ಲಿ ಪಕ್ಷದ ರಾಷ್ಟ್ರೀಯ ನಾಯಕ ಗೌರವ್‌ ಭಾಟಿಯಾ ಭಾಗವಹಿಸಲಿದ್ದಾರೆ ಎಂದು ವರದಿ ತಿಳಿಸಿದೆ.

See also  ಕಾಂಗ್ರೆಸ್‌ನಿಂದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶತ ಸೀಯಾಳಾಭಿಷೇಕ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget