ಕರಾವಳಿಪುತ್ತೂರುರಾಜಕೀಯ

ಪುತ್ತೂರು:ಸ್ವತಂತ್ರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ,ಏ.17ರಂದು ನಾಮಪತ್ರ ಸಲ್ಲಿಕೆ

319

ನ್ಯೂಸ್ ನಾಟೌಟ್ : ಕುತೂಹಲಕ್ಕೆ ಕಾರಣವಾಗಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಾರಿ ಬೆಳವಣಿಗೆಗಳಾಗಿವೆ. ಮೇ ೧೦ರಂದು ನಡೆಯಲಿರುವ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಸಿಗದೇ ಬೇಸರಗೊಂಡಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಇದೀಗ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಈ ಬಗ್ಗೆ ರಾಜಕೀಯ ವಲಯದಲ್ಲಿ ಬಾರಿ ಚರ್ಚೆಗೂ ಕಾರಣವಾಗಿತ್ತು. ಇದೀಗ ಅಭಿಮಾನಿಗಳ ಕೋರಿಕೆಯಂತೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅರುಣ್ ಕುಮಾರ್ ಪುತ್ತಿಲ ಅವರು ತಯಾರಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇಂದು (ಏಪ್ರಿಲ್ 15) ಪತ್ರಿಕಾಗೋಷ್ಠಿ ಕರೆದು ತಮ್ಮ ಅಧಿಕೃತ ನಿಲುವನ್ನು ಪ್ರಕಟಿಸಿರುವ ಅರುಣ್‌ ಕುಮಾರ್ ಪುತ್ತಿಲ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಎ 17ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗ್ಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಬಲಿ ನಡೆದು ಬಟ್ಟಲು ಕಾಣಿಕ ಸೇವೆಯ ಬಳಿಕ ಗಂಧ ಪ್ರಸಾದ ಸ್ವೀಕರಿಸಿ ಬೆಂಬಲಿಗರೊಂದಿಗೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.

See also  ದೈವಸ್ಥಾನದ ಲೆಕ್ಕಚಾರದ ಅಪಪ್ರಚಾರ ಸರಿಯಲ್ಲ: ಪ್ರವೀಣ್ ಹೇಳಿಕೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget