ಕರಾವಳಿಪುತ್ತೂರುರಾಜಕೀಯ

ಪುತ್ತೂರು: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ,ಮುಖ್ಯರಸ್ತೆಯಲ್ಲಿ ಹೆಜ್ಜೆ ಹಾಕಿದ ಸಾವಿರಾರು ಕಾರ್ಯಕರ್ತರು

224

ನ್ಯೂಸ್ ನಾಟೌಟ್ : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ವತಿಯಿಂದ ಪುತ್ತೂರು ಪೇಟೆಯಲ್ಲಿ ಬೃಹತ್ ಮೆರವಣಿಗೆ ನಡೆಯಿತು.ಈ ಸಂದರ್ಭ ಪುತ್ತೂರಿನಲ್ಲಿ ಸಹಸ್ರ ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಮುಖ್ಯರಸ್ತೆಯಾಗಿ ಸಾಗಿದ ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಚಲನಚಿತ್ರ ನಟಿ ಶ್ರುತಿ, ಸಂಸದ ತೇಜಸ್ವಿ ಸೂರ್ಯ, ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ಆಗಿರುವ ನಳಿನ್ ಕುಮಾರ್ ಕಟೀಲ್ ಮುಂತಾದವರು ಇದ್ದರು. ಪುತ್ತೂರು ಶಾಸಕ ಸಂಜೀವ ಮಠಂದೂರು, ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಸೇರಿದಂತೆ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

See also  ರಾಮ ಮಂದಿರ ಉದ್ಘಾಟನೆಗೆ ಬರಲು ಅಡ್ವಾಣಿ,ಮುರಳಿ ಮನೋಹರ್‌ ಜೋಶಿಗೆ ವಿಶೇಷ ವಿಮಾನ..? ಟೀಕೆಯ ಬಳಿಕ ವಿಶ್ವಹಿಂದೂ ಪರಿಷತ್‌ ಈ ನಿರ್ಧಾರ ಮಾಡಿತಾ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget