ನ್ಯೂಸ್ ನಾಟೌಟ್: ಪುತ್ತೂರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರೊಂದು ಗುದ್ದಿ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿರುವ ಅಮಾನವೀಯ ಘಟನೆ ಸುಳ್ಯ ಸಮೀಪದ ಬೊಳುಬೈಲ್ ಬಳಿ ಇದೀಗ ನಡೆದಿದೆ.
ಪುತ್ತೂರು ಕಡೆಯಿಂದ ದ್ವಿಚಕ್ರ ವಾಹನ ಬರುತ್ತಿತ್ತು. ಈ ಸಂದರ್ಭದಲ್ಲಿ ಅದೇ ಕಡೆಯಿಂದ ಬಂದ ಕಾರು ಓವರ್ ಟೇಕ್ ಮಾಡುವ ರಭಸದಲ್ಲಿ ದ್ವಿಚಕ್ರ ವಾಹನಕ್ಕೆ ಗುದ್ದಿದೆ. ಈ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ದ್ವಿಚಕ್ರ ವಾಹನ ಸವಾರ ಗಾಯಗೊಂಡಿದ್ದಾನೆ. ಆತನನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.