ಕರಾವಳಿಪುತ್ತೂರುವೈರಲ್ ನ್ಯೂಸ್

ಪುತ್ತೂರು: ಡಾಂಬರ್‌ನಲ್ಲಿ ಸಿಲುಕಿದ ನಾಗರಹಾವನ್ನು ರಕ್ಷಿಸಿದ ಉರಗ ಪ್ರೇಮಿ ಯಾರು? ಎರಡು ದಿನಗಳ ಪ್ರಯತ್ನ ಕೊನೆಗೂ ಫಲ ಕೊಡ್ತಾ..?

221

ನ್ಯೂಸ್ ನಾಟೌಟ್ : ಡಾಂಬರ್‌ನಲ್ಲಿ ಸಿಲುಕಿದ ನಾಗರಹಾವೊಂದನ್ನು ಉರಗ ಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಡಾಂಬರ್‌ನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹಾವನ್ನು ಎರಡು ದಿನಗಳ ಕಠಿಣ ಪರಿಶ್ರಮದೊಂದಿಗೆ ತೇಜಸ್ ರಕ್ಷಿಸಿದ್ದು, ತೇಜಸ್ ಕಾರ್ಯಕ್ಕೆ ಸಾಮಾಜಿಕ ತಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಉರಿ ಬಿಸಿಲಿನಲ್ಲಿ ಡಾಂಬರ್ ರಸ್ತೆಯಲ್ಲಿ ಸಿಲುಕಿ ಹಾವು ಹಾಗೂ ಇತರ ಸಣ್ಣ ಪ್ರಾಣಿಗಳು ಒದ್ದಾಡೋದು ಸಾಮಾನ್ಯವಾಗಿದ್ದು, ಈ ವೇಳೆ ಬಳಿಗೂ ಹೋಗದೆ ಹಾವುಗಳನ್ನು ಅಲ್ಲೇ ಬಿಟ್ಟು ಹೋಗುವವರೇ ಹೆಚ್ಚು. ಆದರೆ ತೇಜಸ್ ಬನ್ನೂರು ಇಂಥಹ ಹಲವು ಕಾರ್ಯಗಳನ್ನು ಮಾಡಿದ್ದು, ಅದರಲ್ಲೂ ಹಾವುಗಳನ್ನು ರಕ್ಷಿಸಿ ಅವುಗಳಿಗೆ ಜೀವದಾನವನ್ನು ಮಾಡಿರುವ ಹಲವು ಉದಾಹರಣೆಗಳಿವೆ.

ಅದೇ ರೀತಿಯ ಒಂದು ಕಾರ್ಯಾಚರಣೆಯನ್ನು ತೇಜಸ್ ಬನ್ನೂರು ಪುತ್ತೂರಿನ ನೆಹರೂ ನಗರದಲ್ಲಿ ಮಾಡಿದ್ದಾರೆ. ನಗರದ ಮನೆಯೊಂದರಲ್ಲಿ ಡಾಂಬರ್ ಡಬ್ಬಿಗಳನ್ನು ಶೇಖರಿಸಿಟ್ಟ ಪ್ರದೇಶದಲ್ಲಿ ನಾಗರಹಾವು ಪತ್ತೆಯಾಗಿತ್ತು. ಹಾವೊಂದು ಡಾಂಬರ್ ಡಬ್ಬಿಗಳ ಅಂಚಿನಲ್ಲಿ ಹೋಗಿರುವುದನ್ನು ಗಮನಿಸಿದ್ದ ಮನೆ ಮಂದಿ ತೇಜಸ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ತೇಜಸ್ ಅಲ್ಲಿಗೆ ಬರುವ ಮೊದಲೇ ಆ ಹಾವು ಅಲ್ಲಿಂದ ತಪ್ಪಿಸಿ ಬೇರೆ ಕಡೆಗೆ ಹೋಗಿತ್ತು.

ಡಾಂಬರ್ ಡಬ್ಬಿಗಳನ್ನು ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಡಬ್ಬದಿಂದ ನೆಲಕ್ಕೆ ಹರಿದಿದ್ದ ಡಾಂಬರ್‌ನಲ್ಲಿ ಮತ್ತೊಂದು ಹಾವು ಬಿದ್ದಿರುವುದು ತೇಜಸ್ ಗಮನಕ್ಕೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ತೇಜಸ್ ಹಾವನ್ನು ತನ್ನ ಬೇರೊಂದು ಕಡೆಗೆ ವರ್ಗಾಯಿಸಿ ಅಲ್ಲಿ ಹಾವಿನ ಚರ್ಮದಿಂದ ಡಾಂಬರ್ ಅನ್ನು ತೆಗೆಯುವ ಪ್ರಯತ್ನ ಮಾಡಿದ್ದಾರೆ.

ನಾಗರಹಾವಿನ ಚರ್ಮದಿಂದ ಡಾಂಬರ್ ತೆಗೆಯಲು ಎರಡು ದಿನಗಳ ಕಾಲ ಶ್ರಮಪಟ್ಟಿದ್ದಾರೆ ಎನ್ನಲಾಗಿದೆ. ನಾಗರಹಾವನ್ನು ಶುದ್ಧ ಕೊಬ್ಬರಿ ಎಣ್ಣೆಯಲ್ಲಿ ಒಂದು ದಿನ ಸಂಪೂರ್ಣ ಅದ್ದಿ ಇಟ್ಟು ಬಳಿಕ ಅದರ ಮೇಲಿಂದ ಡಾಂಬರ್ ಅನ್ನು ಬೇರ್ಪಡಿಸಿದ್ದಾರೆ. ಸುಮಾರು ಒಂದು ವರ್ಷ ಪ್ರಾಯದ ನಾಗರಹಾವು ಚೇತರಿಸಿಕೊಂಡ ಬಳಿಕ ಅದನ್ನು ಸುರಕ್ಷಿತವಾಗಿ ಕಾಡಿಗೆ ಬಿಡುವ ಕಾರ್ಯವನ್ನೂ ತೇಜಸ್ ಮಾಡಿದ್ದಾರೆ.

See also  ಬೆಂಬಿಡದೆ ಸುರಿಯುತ್ತಿರುವ ಮಳೆ ,ಮನೆಯೊಳಗೆ ನುಗ್ಗಿದ ಚರಂಡಿ ನೀರು!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget