ಕರಾವಳಿಕ್ರೈಂಪುತ್ತೂರು

ಪುತ್ತೂರು: ಹೆರಿಗೆ ವೇಳೆ ತೀವ್ರ ರಕ್ತಸ್ರಾವ, ಕರಾಯದ ಮಹಿಳೆ ದಾರುಣ ಸಾವು!

252

ನ್ಯೂಸ್ ನಾಟೌಟ್: ಹೆರಿಗೆ ವೇಳೆ ತೀವ್ರ ರಕ್ತಸ್ರಾವಗೊಂಡ ಹಿನ್ನೆಲೆಯಲ್ಲಿ ಬೆಳ್ತಂಗಡಿಯ ಕರಾಯ ಮಹಿಳೆಯೊಬ್ಬರು ಪುತ್ತೂರಿನಿಂದ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಅಸುನೀಗಿದ ದಾರುಣ ಘಟನೆ ನಡೆದಿದೆ.

ಭವ್ಯ (29) ಹೆರಿಗೆಗಾಗಿ ಪುತ್ತೂರಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಅವರಿಗೆ ಹೆರಿಗೆಯಾದ ಬಳಿಕ ತೀವ್ರ ರಕ್ತಸ್ರಾವಕ್ಕೊಳಗಾದರು. ತಕ್ಷಣ ಪುತ್ತೂರಿನ ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವುದಕ್ಕೆ ನಿರ್ಧರಿಸಲಾಯಿತು. ಈ ವೇಳೆ ದಾರಿ ಮಧ್ಯೆ ಅಸುನೀಗಿದ್ದಾರೆ ಎನ್ನಲಾಗಿದೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಭವ್ಯರವರದ್ದು 3ನೇ ಹೆರಿಗೆಯಾಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾಗುತ್ತಲೇ ತೀವ್ರ ರೀತಿಯಲ್ಲಿ ರಕ್ತಸ್ರಾವ ಉಂಟಾಗಿದೆ. ಮೃತರು ಪತಿ ಬಾಲಕೃಷ್ಣ ಗೌಡ, 4ನೇ ತರಗತಿ ಕಲಿಯುತ್ತಿರುವ ಪುತ್ರ ಭವಿಷ್, 3ನೇ ತರಗತಿಯ ಸ್ವಸ್ತಿಕ್ ಮತ್ತು ಹಸುಗೂಸು ಗಂಡು ಮಗುವನ್ನು ಅಗಲಿದ್ದಾರೆ. ಭವ್ಯ ಅವರು ಕೊಕ್ಕಡದ ಕೃಷ್ಣಪ್ಪ ಎಂಬವರ ಮಗಳಾಗಿದ್ದಾಳೆ.

See also  ಮತ್ತೆ ಕಾಡಾನೆಯ ಅಟ್ಟಹಾಸ!,ಅಕ್ಕ ಸ್ಥಳದಲ್ಲೇ ದುರಂತ ಅಂತ್ಯ,ತಂಗಿ ಸ್ಥಿತಿ ಗಂಭೀರ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget