ನ್ಯೂಸ್ ನಾಟೌಟ್: ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ದ.ಕ ಜಿಲ್ಲೆ ಪ್ರಥಮ ಮಹಾ ಅಧಿವೇಶನ ಮತ್ತು ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ ಪುತ್ತೂರಿನಲ್ಲಿ ಭಾನುವಾರ (ಜೂ1) ನಡೆಯಿತು.
ತೆಂಕಿಲದ ಗೌಡ ಸಮುದಾಯದಲ್ಲಿ ಆಯೋಜಿಸಿದ ಕಾರ್ಯಕ್ರಮವನ್ನು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ವೇಳೆ ಒಕ್ಕಲಿಗ ಸಮುದಾಯದ ನಾಯಕರಾದ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ (ರಿ) ಮಂಗಳೂರು ಇದರ ಅಧ್ಯಕ್ಷ ಲೋಕಯ್ಯ ಗೌಡ .ಕೆ, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ (ರಿ) ಬೆಳ್ತಂಗಡಿ ಅಧ್ಯಕ್ಷ ಪೂವಾಜೆ ಕುಶಾಲಪ್ಪ ಗೌಡ, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ (ರಿ) ಬಂಟ್ವಾಳ ಅಧ್ಯಕ್ಷ ಸಿ.ಕೆ. ಕುಶಾಲಪ್ಪ ಗೌಡ, ಗೌಡರ ಯುವ ಸೇವಾ ಸಂಘ ಸುಳ್ಯ ತಾಲೂಕು ಇದರ ಅಧ್ಯಕ್ಷ ಪಿ.ಎಸ್. ಗಂಗಾಧರ, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ (ರಿ) ಮಂಗಳೂರು ಅಧ್ಯಕ್ಷೆ ಸೌಮ್ಯ ಸುಕುಮಾರ್, ಒಕ್ಕಲಿಗರ ಗೌಡರ ಸೇವಾ ಸಂಘ ಪುತ್ತೂರು ತಾಲೂಕು ಅಧ್ಯಕ್ಷ ರವಿ ಮಂಗ್ಲಿ ಮನೆ, ಒಕ್ಕಲಿಗರ ಗೌಡರ ಸೇವಾ ಸಂಘ (ರಿ) ಕಡಬ ತಾಲೂಕು ಅಧ್ಯಕ್ಷ ಸುರೇಶ್ ಬೈಲು, ದಿನೇಶ್ ಮಡಪ್ಪಾಡಿ ಸೇರಿದಂತೆ ಹಲವಾರು ಮಂದಿ ಪಾಲ್ಗೊಂಡಿದ್ದರು.