Latestಕರಾವಳಿಕ್ರೈಂಪುತ್ತೂರು

ಪುತ್ತೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಕಟ್ಟಡದ ಮೇಲೆ ಪೊಲೀಸ್ ದಾಳಿ..! ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ..!

1.6k

ನ್ಯೂಸ್‌ ನಾಟೌಟ್‌: ಪುತ್ತೂರು ನಗರದ ಸಾಮೆತ್ತಡ್ಕ ಎಂಬಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸಾಮೆತ್ತಡ್ಕ ನಿವಾಸಿಯೊಬ್ಬ ತನ್ನ ಮನೆಯ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾನೆ ಎಂಬ ಖಚಿತ ದೂರಿನ ಮೇರೆಗೆ ದಾಳಿ ನಡೆದಿದೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. (ಅಪರಾಧ ಕ್ರಮಾಂಕ: 51/2025). ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ, 2023ರ ಕಲಂ 143(2) ಹಾಗೂ ಅನೈತಿಕ ಸಾಗಾಣಿಕೆ (ತಡೆ) ಕಾಯ್ದೆ, 1956ರ ಕಲಂ 3, 4, ಮತ್ತು 5(3)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲವು ಜು.15 ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ.

ಕ್ರಿಕೆಟಿಗ ಮೊಹ್ಮದ್ ಶಮಿಗೆ ಹೈಕೋರ್ಟ್​ನಲ್ಲಿ ಹಿನ್ನಡೆ..! ಪತ್ನಿ, ಮಗಳಿಗೆ ತಿಂಗಳಿಗೆ 4 ಲಕ್ಷ ರೂ. ಜೀವನಾಂಶ ಪಾವತಿಸಲು ಆದೇಶ..!

ಸಂಸತ್‌ ನಲ್ಲಿ ಸ್ಮೋಕ್‌ ಬಾಂಬ್‌ ಪ್ರಕರಣದ ಇಬ್ಬರು ಆರೋಪಿಗಳಿಗೆ ರಿಲೀಫ್..! 1.7 ವರ್ಷದ ಬಳಿಕ ಜಾಮೀನು..!

See also  'ಕವಿರತ್ನ ಕಾಳಿದಾಸ' ದಲ್ಲಿ ನಟಿಸಿದ್ದ ಹಿರಿಯ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆಯಾಗಲು ಕಾರಣವೇನು? ಡಾ.ರಾಜ್ ಕುಮಾರ್ ರಂತಹ ಮೇರು ನಟರೊಂದಿಗೆ ನಟಿಸಿದ್ದ ನಟಿಗೆ ಹೀಗೇಕಾಯ್ತು?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget