ಕ್ರೈಂಪುತ್ತೂರುಪುತ್ತೂರುವೈರಲ್ ನ್ಯೂಸ್

ಪುತ್ತೂರು: ಲವ್ ಪ್ರಪೋಸ್ ನಿರಾಕರಿಸಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಗೆ ಅಪ್ರಾಪ್ತನಿಂದ ಚಾಕು ಇರಿತ ..? ಇಲ್ಲಿದೆ ವಿಡಿಯೋ

233

ನ್ಯೂಸ್ ನಾಟೌಟ್: ವಿದ್ಯಾರ್ಥಿನಿ ಪ್ರೇಮ ನಿವೇದನೆ ನಿರಾಕರಿಸಿದ್ದಕ್ಕೆ ಅನ್ಯಕೋಮಿನ ಅಪ್ರಾಪ್ತೆ ವಿದ್ಯಾರ್ಥಿನಿ (Student) ಕೈಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚಾಕುವಿನಿಂದ ಇರಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು (Puttur) ತಾಲೂಕಿನಲ್ಲಿ ನಡೆದಿದೆ.

ಹಿಂದೂ ವಿದ್ಯಾರ್ಥಿ ಚಾಕುವಿನಿಂದ ವಿದ್ಯಾರ್ಥಿನಿಯ ಕೈಗೆ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಸದ್ಯ ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಕೂಡ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬುಕ್‌ಸ್ಟಾಲ್‌ನಿಂದ ವಾಪಸ್ ಆಗುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಬಂದ ವಿದ್ಯಾರ್ಥಿ, ನಿನ್ನನ್ನು ಪ್ರೀತಿಸುವುದಾಗಿ ಹೇಳಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ಅದನ್ನು ನಿರಾಕರಿಸಿದ್ದಾಳೆ. ಆಗ ಆತ ಕೈಗೆ ಚಾಕುವಿನಿಂದ ಇರಿದಿರುವುದಾಗಿ ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಇಷ್ಟು ಮಾತ್ರವಲ್ಲದೇ ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದರು. ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳಲು ಒತ್ತಾಯಿಸಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಈ ಕುರಿತು ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

See also  ಸುಳ್ಯ: ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಕೇಸ್‌?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget