Latestಪುತ್ತೂರುಮಂಗಳೂರುವೈರಲ್ ನ್ಯೂಸ್

ಪುತ್ತೂರು: ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್..! ಬಿಜೆಪಿ ಮುಖಂಡನಿಗೆ ವಿಚಾರಣೆಗೆ ಹಾಜರಾಗಲು ಸೂಚನೆ..!

482

ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಎಫ್‌ ಐಆರ್ ದಾಖಲಾದ ಬೆನ್ನಲ್ಲೇ ಪುತ್ತಿಲ ಪರಿವಾರ ಮುಖ್ಯಸ್ಥ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್ ನೀಡಲಾಗಿದೆ.

ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್ ನೀಡಿದ್ದಾರೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ:58ರಡಿ ನೋಟೀಸ್ ಜಾರಿ ಮಾಡಲಾಗಿದೆ. ಅಲ್ಲದೇ ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನಲ್ಲಿ ಉಲ್ಲೇಖಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ನೋಟಿಸ್ ಜಾರಿ ಮಾಡಿದ್ದು, ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಲು ಸೂಚನೆ ನೀಡಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳುವ ಬಗ್ಗೆ ನೋಟಿಸ್ ಮೂಲಕ ಮಾಹಿತಿ ನೀಡಲಾಗಿದೆ.

ರಾತ್ರಿ ಸಂಘಟನೆಗಳ ಪ್ರಮುಖರ ಮನೆಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿದ ಪೊಲೀಸರು..! ಕಡಬ ಠಾಣೆಯ ಮುಂಭಾಗ ಹಿಂದೂ ಮುಖಂಡರಿಂದ ಪ್ರತಿಭಟನೆ, ಪ್ರಕರಣ ದಾಖಲು..!

ಸುಳ್ಯ: ಎನ್ನೆoಪಿಯುಸಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ, ಅತಿಥಿಗಳಿಂದ ಮಾರ್ಗದರ್ಶನ

See also  ಕೆ.ಜಿ.ಎಫ್ ನಟಿಯಿಂದ ಅಡ್ಡಾದಿಡ್ಡಿ ಕಾರು ಚಾಲನೆ..! ಹೊಡೆಯಬೇಡಿ ಎಂದು ಸಾರ್ವಜನಿಕರಲ್ಲಿ ಬೇಡಿಕೊಂಡ ರವೀನಾ ಟಂಡನ್..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget   Ad Widget