ಕರಾವಳಿಕ್ರೈಂಪುತ್ತೂರು

ಪುತ್ತೂರು: ಅಡಿಕೆ ಕಳ್ಳರಿಂದ ಲಕ್ಷ – ಲಕ್ಷ ಮೌಲ್ಯದ ಸೊತ್ತು ವಶಕ್ಕೆ..! ಬಂಧನವಾದ ಆ ಖತರ್ನಾಕ್ ಕಳ್ಳರು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ

241

ನ್ಯೂಸ್‌ ನಾಟೌಟ್‌: ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಕೊಯಿಲಾದ ನವೀನ ಕುಮಾರ ರೈಯ ಹಳೆ ಮನೆಯ ಕೊಟ್ಟಿಗೆಯ ಮೇಲ್ಚಾವಣಿಯಲ್ಲಿದ್ದ ಎನ್ ಕೆ ಆರ್ ಎಂದು ಮಾರ್ಕ್ ಮಾಡಿರುವ ಸುಮಾರು 23 ಗೋಣಿ ಸುಲಿಯದ ಅಡಿಕೆಯನ್ನು ಕಳವು ಮಾಡಲಾಗಿತ್ತು. ದಿನಾಂಕ 12-10-2023 ರಂದು ಬೆಳಿಗ್ಗೆ 08:00 ಗಂಟೆಯಿಂದ ದಿನಾಂಕ 26-10-2023 ರ ಬೆಳಿಗ್ಗೆ 11:00 ಘಂಟೆ ಮಧ್ಯೆ ಕಳವು ಮಾಡಿದ ಶಂಕೆ ವ್ಯಕ್ತವಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು (Puttur)ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಾದ 1) ಶ್ರವಣ್ ಕೆ, ಪ್ರಾಯ 20 ವರ್ಷ, ಕೊಯ್ಲ ಮನೆ, ಬಡಗನ್ನೂರು ಗ್ರಾಮ, ಪುತ್ತೂರು ತಾಲೂಕು 2) ಜಯಚಂದ್ರ, ಪ್ರಾಯ: 21 ವರ್ಷ, ಬಾಣಪದವು ಮನೆ, 3) ಅಶೋಕ, ಪ್ರಾಯ:24 ವರ್ಷ, ಡೊಬ್ಬಟ್ಟಗಿರಿ ಮನೆ, ನಿಡ್ಪಳ್ಳಿ ಗ್ರಾಮ, ಪುತ್ತೂರು ತಾಲೂಕು 4) ಪುನೀತ್, ಪ್ರಾಯ: 20 ವರ್ಷ, ಕಲ್ಲಮೂಲೆ ಮನೆ, ನಿಡ್ಪಳ್ಳಿ ಗ್ರಾಮ, ಪುತ್ತೂರು ತಾಲೂಕು ಈ ಮೂವರನ್ನು ಬಂಧಿಸಿ, ಸುಮಾರು ರೂ 1,55,925/- ಮೌಲ್ಯದ ಅಡಿಕೆ ಹಾಗೂ ಕಳವು ಮಾಡಲು ಉಪಯೋಗಿಸಿದ ಸ್ವಿಪ್ಟ್ ಕಾರು ಮತ್ತು ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡಿರುವ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ 4,15,925/- ಆಗಿರುತ್ತದೆ.

ಈ ಪ್ರಕರಣವನ್ನು ಬೇದಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಎಮ್ ಎನ್ ರವರ ನಿರ್ದೇಶನದಲ್ಲಿ ಪುತ್ತೂರು ಉಪಾಧೀಕ್ಷಕರಾದ ಡಾ. ಗಾನ ಪಿ. ಕುಮಾರ್ ರವರ ಮಾರ್ಗದರ್ಶನದಲ್ಲಿ , ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ರವಿ.ಬಿ.ಎಸ್, ರವರ ಆದೇಶದಂತೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಧನಂಜಯ ಬಿ.ಸಿ ರವರ ನೇತೃತ್ವದಲ್ಲಿ ಎಎಸ್ಐ ಮುರುಗೇಶ್, ಸಿಬ್ಬಂದಿಗಳಾದ ಬಾಲಕೃಷ್ಣ, ಅದ್ರಾಮ, ಪ್ರವೀಣ್ ರೈ, ಹರೀಶ್ ಗೌಡ, ದಯಾನಂದ, ಸುಂದರ್, ವೆಂಕಪ್ಪ, ಸಲೀಂ, ನಾಗೇಶ್ ಕೆ ಸಿ, ಮುನಿಯ ನಾಯ್ಕ, ಕಾರ್ತಿಕ್, ಯುವರಾಜ ನಾಯ್ಕ, ಚಾಲಕರಾದ ಯೋಗೀಶ್ ಭಾಗವಹಿಸಿದ್ದಾರೆ.

See also  ಸುರತ್ಕಲ್ : ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಅಪಹರಣಕ್ಕೆ ಯತ್ನ?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget