ಪುತ್ತೂರು: ಸಹಪಾಠಿಗೆ ಗರ್ಭವತಿಯಾಗಿಸಿದ ಕೃಷ್ಣರಾವ್ ವಶಕ್ಕೆ , ಮೈಸೂರಿನಲ್ಲಿ ಸೆರೆ
ನ್ಯೂಸ್ ನಾಟೌಟ್: ಪುತ್ತೂರಿನ ಕಾಲೇಜು ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಹಪಾಠಿ ವಿದ್ಯಾರ್ಥಿ ಕೃಷ್ಣ ಜೆ ರಾವ್ (21 ವರ್ಷ) ಅವರನ್ನು ಮೈಸೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೂ.24 ರಂದು ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ:49/2025, ಕಲಂ:64(1), 69 ಬಿ.ಎನ್.ಎಸ್ 2023 ಪ್ರಕರಣ ದಾಖಲಾಗಿತ್ತು.
ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ಜೆ ರಾವ್ ನನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣಾ ಪೊಲೀಸರು ದಿನಾಂಕ: 04.07.2025 ರಂದು ರಾತ್ರಿ ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿರುತ್ತಾರೆ. ಆರೋಪಿತನ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.