ಕರಾವಳಿಪುತ್ತೂರುಶಿಕ್ಷಣಸಾಧಕರ ವೇದಿಕೆ

ಪುತ್ತೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಗ್ರಾ.ಪಂ. ಅಧ್ಯಕ್ಷೆಯ ವಿಶೇಷ ಸಾಧನೆ! ಕಳೆದ ಬಾರಿ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದರು!

300

ನ್ಯೂಸ್ ನಾಟೌಟ್: ಕಳೆದ ಬಾರಿ ಎಸೆಸೆಲ್ಸಿ ಪರೀಕ್ಷೆಯನ್ನು ಖಾಸಗಿಯಾಗಿ ಬರೆದು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದ ಪುತ್ತೂರಿನ ಪಾಣಾಜೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಭಾರತಿ ಭಟ್‌ 24 ವರ್ಷಗಳ ಬಳಿಕ ದ್ವಿತೀಯ ಪಿಯು ಪರೀಕ್ಷೆಯನ್ನು ಖಾಸಗಿಯಾಗಿ ಬರೆದು 421 ಅಂಕಗಳೊಂದಿಗೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಬಡ ಕುಟುಂಬದಲ್ಲಿ ಜನಿಸಿದ್ದ ಭಾರತಿ 1997-98ರಲ್ಲಿ 8ನೇ ತರಗತಿ ತೇರ್ಗಡೆ ಹೊಂದಿದ್ದು, ತಂದೆಯ ವಿಯೋಗದಿಂದಾಗಿ ವಿದ್ಯಾಭ್ಯಾಸ ಮುಂದುವರಿಸಲಾಗಲಿಲ್ಲ. ಅನಂತರ ವೆಂಕಟ್ರಮಣ ಭಟ್‌ ಅವರನ್ನು ವಿವಾಹವಾಗಿ ಪಾಣಾಜೆಯಲ್ಲಿ ನೆಲೆಸಿರುವ ಅವರು 2020-21ನೇ ಸಾಲಿನ ಗ್ರಾ.ಪಂ. ಚುನಾ ವಣೆಯಲ್ಲಿ ಸದಸ್ಯೆ ಯಾಗಿ ಆಯ್ಕೆಯಾಗಿ 2 ವರ್ಷ ಗಳಿಂದ ಪಾಣಾಜೆ ಗ್ರಾ.ಪಂ. ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಬೆಳ್ತಂಗಡಿಯ ಕೊಯ್ಯೂರು ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಗಿರುವ ಪಾಣಾಜೆಯ ಬಾಲಕೃಷ್ಣ ಬೇರಿಕೆ ಅವರ ಮಾರ್ಗದರ್ಶನ ದೊಂದಿಗೆ 2021-22ನೇ ಸಾಲಿನ 10ನೇ ತರಗತಿಯ ಪರೀಕ್ಷೆ ಬರೆದು ಶೇ. 54 ಅಂಕ ಗಳಿಸಿದ್ದರು ಎಂದು ವರದಿ ತಿಳಿಸಿದೆ.
ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯ ನಿರೀಕ್ಷೆ ಇರಲಿಲ್ಲ. ಬಾಲ್ಯದಲ್ಲಿ ಸಿಗದಿರುವುದನ್ನು ಈಗ ಪಡೆದಿದ್ದೇನೆ. ಮುಂದೆ ಪದವಿ ಪಡೆಯುವ ಗುರಿ ಹೊಂದಿದ್ದೇನೆ ಎಂದು ಭಾರತಿ ಭಟ್‌ ಹೇಳಿಕೊಂಡಿದ್ದಾರೆ.

See also  ರೈಲಿನಡಿಗೆ ಬಿದ್ದು 17 ಎಮ್ಮೆಗಳು ಸಾವು..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget