ನ್ಯೂಸ್ ನಾಟೌಟ್: ಶಾಲೆಯಲ್ಲಿ ವಿದ್ಯಾರ್ಥಿಗಳು ತಪ್ಪು ಮಾಡಿದಾಗ ಶಿಕ್ಷಕರು ಕೆಲವು ಸಲ ಶಿಕ್ಷೆಯನ್ನು ಕೊಟ್ಟಿರುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಶಿಕ್ಷಕರು ವಿದ್ಯಾರ್ಥಿನಿ ತರಗತಿಯಲ್ಲಿ ಕೀಟಲೆ ಮಾಡಿದಳು ಅನ್ನುವ ಕಾರಣಕ್ಕೆ ಬಸ್ಕಿ ಶಿಕ್ಷೆ ನೀಡಿದ್ದಾರೆ. ಇದರಿಂದ ವಿದ್ಯಾರ್ಥಿನಿ ಅಸ್ವಸ್ಥಳಾಗಿದ್ದಾಳೆಂದು ಪೋಷಕರು ಆಕ್ರೋಶಗೊಂಡು ಪುತ್ತೂರು ಶಾಸಕ ಅಶೋಕ್ ರೈ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ ಘಟನೆ ನಡೆದಿದೆ.
ಪುತ್ತೂರು ತಾಲೂಕಿನ ಕಾವಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ಬುಧವಾರ ಈ ಘಟನೆ ನಡೆದಿದ್ದು ಅಸ್ವಸ್ಥ ವಿದ್ಯಾರ್ಥಿನಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ತರಗತಿಯಲ್ಲಿ ಕೀಟಲೆ ಮಾಡಿದ್ದಾಳೆ ಎಂಬ ಕಾರಣಕ್ಕೆ ಪ್ರಭಾರ ಮುಖ್ಯ ಶಿಕ್ಷಕ ಬಸ್ಕಿ ಹೊಡಿಸಿದ್ದಾರೆ ಎಂದು ತಿಳಿದು ಬಂದಿದೆ.