ನ್ಯೂಸ್ ನಾಟೌಟ್: ವಿದ್ಯುತ್ ಶಾಕ್‌ನಿಂದ ಮಹಿಳೆ ಮೃತಪಟ್ಟ ಘಟನೆ ಎ. 30ರಂದು ಪುತ್ತೂರಿನ ಅರಿಯಡ್ಕ ಗ್ರಾಮದ ಬೇಂಗತ್ತಡ್ಕದಲ್ಲಿ ಸಂಭವಿಸಿದೆ.ದೇವಪ್ಪ ನಾಯ್ಕ ಅವರ ಪತ್ನಿ ಭಾಗೀರಥಿ (59) ಮೃತರು ಎಂದು ಗುರುತಿಸಲಾಗಿದೆ.
ಆಗಿದ್ದೇನು?
ಎ. 30ರಂದು ಮಧ್ಯಾಹ್ನ ವೇಳೆ ಮನೆಯ ಟೇರಸ್ ಮೇಲೆ ತೆರಳಿದ್ದ ಭಾಗೀರಥಿ ಅವರು ಅದೇ ಸಂದರ್ಭದಲ್ಲಿ ಪಂಪ್ ಗೆ ಅಳವಡಿಸಿದ್ದ ವಯರ್ ಮೇಲೆ ಕಾಲಿಟ್ಟಿದ್ದಾರೆ. ಆ ವೇಳೆ ವಿದ್ಯುತ್ ಸ್ಪರ್ಶಿಸಿದ್ದು ಘಟನೆಗೆ ಕಾರಣ ಎನ್ನಲಾಗಿದೆ. ಮೃತರು ಪತಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.