ನ್ಯೂಸ್ ನಾಟೌಟ್: ಮಗನನ್ನು ಬೆಂಗಳೂರು ಬಸ್ ಗೆ ಹತ್ತಿಸಲು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಸಂದರ್ಭದಲ್ಲಿ ಕಾರ್ ಗೆ ಡಿಕ್ಕಿಯಾಗಿ ಅಪ್ಪ ಸ್ಥಳದಲ್ಲೇ ಮೃತಪಟ್ಟು ಮಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಮೃತಪಟ್ಟವರನ್ನು ಪಂಜಿಗುಡ್ಡೆ ನಿವಾಸಿ ರಘುರಾಮ ಶೆಟ್ಟಿ ಎಂದು ಗುರುತಿಸಲಾಗಿದೆ. ಮಗನಿಗೆ ಡ್ರಾಪ್ ಕೊಡಲು ಬಂದಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ಶೀನಪ್ಪರವರ ಕಾರು ಗುದ್ದಿದೆ. ಸದ್ಯ ಗಂಭೀರ ಗಾಯಗೊಂಡಿರುವ ಮಗನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.