ಕರಾವಳಿಕ್ರೈಂ

ಪುತ್ತೂರು: ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ, ನೇಣಿಗೆ ಶರಣಾದ ತೃತೀಯ ಬಿಸಿಎ ವಿದ್ಯಾರ್ಥಿನಿ..!

ನ್ಯೂಸ್ ನಾಟೌಟ್: ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿಯನ್ನು ಕೀರ್ತಿಕಾ (19 ವರ್ಷ) ಎಂದು ಗುರುತಿಸಲಾಗಿದೆ. ಪುತ್ತೂರಿನ ಬನ್ನೂರು ಸಮೀಪದ ಸನ್ನಿಧಿ ಲೇಔಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಕೆ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ತೃತೀಯ ಬಿಸಿಎ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆ ಹಿಂದಿರುವ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Related posts

ಅಕ್ರಮವಾಗಿ ಪಡಿತರ ಸಾಗಾಟ! 220 ಚೀಲ ಪಡಿತರ ಅಕ್ಕಿ, ಕಂಟೈನರ್ ವಾಹನ ವಶಕ್ಕೆ !

ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆಗೆ ನಾನು ಕಾರಣನಲ್ಲ: ದೈವದ ಮುಂದೆ ಮಾಜಿ ಸಚಿವರ ಪ್ರಾರ್ಥನೆ

ತಮಿಳು ನಟ ಸಿದ್ದಾರ್ಥ್ ಬಳಿ ಕ್ಷಮೆಯಾಚಿಸಿದ್ದೇಕೆ ನಟ ಪ್ರಕಾಶ್ ರಾಜ್? ಕಾವೇರಿ ವಿವಾದದ ನಡುವೆ ಸಿನಿಮಾ ಪ್ರಚಾರ ಸರಿ ಎಂದರಾ ಪ್ರಕಾಶ್?