ಕರಾವಳಿಪುತ್ತೂರು

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ, ಗಾಯಾಳು ಆಸ್ಪತ್ರೆಗೆ ದಾಖಲು, ತುರ್ತಾಗಿ ತೆರಳಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ

226

ನ್ಯೂಸ್ ನಾಟೌಟ್: ಪುತ್ತೂರಿನ ಕಾಣಿಯೂರು ಗ್ರಾಮದ ಚಾರ್ವಕ ಎಂಬಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿರುವ ಘಟನೆ ಮಂಗಳವಾರ ನಡೆದಿದೆ. ದಾಳಿಯಿಂದ ಗಾಯಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತನನ್ನು ಮನೋಹರ್ ಎಂದು ಗುರುತಿಸಲಾಗಿದೆ.

ಸದ್ಯ ಗಾಯಾಳುವನ್ನು ತುರ್ತಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಕ್ಷಣ ಸ್ಥಳಕ್ಕೆ ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಚಾರ್ವಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತಂಡವೊಂದು ಹಲ್ಲೆ ನಡೆಸಿದೆ. ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂಬುದು ಪೊಲೀಸ್ ತನಿಖೆಯಲ್ಲಿ ಗೊತ್ತಾಗಲಿದೆ. ವೈಯುಕ್ತಿಕವೋ ಅಥವಾ ರಾಜಕೀಯ ಕಾರಣಕ್ಕೋ ಎಂಬುದು ಈಗ ಸದ್ಯಕ್ಕೆ ಗೊತ್ತಾಗಿಲ್ಲ. ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

See also  ಭಯ ಹುಟ್ಟಿಸುವ ಉದ್ದೇಶದಿಂದಲೇ ಪ್ರವೀಣ್ ನೆಟ್ಟಾರ್ ಹತ್ಯೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget