ಕರಾವಳಿಪುತ್ತೂರುರಾಜಕೀಯಸುಳ್ಯ

ಪುತ್ತೂರು:ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಗಂಭೀರ ಗಾಯಗೊಂಡವನ ಹರಿದ ಕಿವಿ ತಮಟೆ! , ಸ್ಕ್ಯಾನಿಂಗ್ ಪೋಟೋಗಳು ವೈರಲ್:ಎಸ್ಪಿ ಭೇಟಿಯಾದ ಪುತ್ತಿಲ

ನ್ಯೂಸ್ ನಾಟೌಟ್ : ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯದ ಸಂದರ್ಭ ಸಂತ್ರಸ್ತ ಯುವಕನ ಕಿವಿಗೆ ಬಲವಾಗಿ ಏಟು ಬಿದ್ದಿತ್ತು ಎಂಬ ಸುದ್ದಿ ಹರಿದಾಡುತ್ತಿದ್ದಂತೆಯೇ ಇದೀಗ ಕಿವಿ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದಕೀಯ ವರದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿವೆ.ಯುವಕನ ಕಿವಿಯದ್ದು ಎಂದು ಹೇಳಲಾದ ಸ್ಕ್ಯಾನಿಂಗ್ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು,ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರು ದ.ಕ ಜಿಲ್ಲಾ ಎಸ್ಪಿಯವರನ್ನು ಭೇಟಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪ ಬಿಜೆಪಿ ಮುಖಂಡರ ವಿರುದ್ಧ ಬ್ಯಾನರ್ ಹಾಕಲಾಗಿತ್ತು.ಜತೆಗೆ ಚಪ್ಪಲಿ ಹಾರ ,ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಹಾಕಿದ ಪ್ರಕರಣ ಇಡೀ ರಾಜ್ಯದಾದ್ಯಂತ ಸುದ್ದಿಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 11 ಜನರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ನಡೆಸಿದರು ಎಂದು ವ್ಯಾಪಕ ಪ್ರಚಾರ ಪಡೆದುಕೊಂಡ ಪ್ರಕರಣ, ಇದೀಗ ಮತ್ತಷ್ಟು ತೀವ್ರ ಸ್ವರೂಪ ಪಡೆಯುವ ಲಕ್ಷಣ ಕಾಣುತ್ತಿದೆ.

Related posts

‘ಬಸ್ ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸಬೇಕು’, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸೂಚನೆ

ಸುಳ್ಯ: ಸಿವಿಲ್‌ ನ್ಯಾಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಗೋಳಿತ್ತೊಟ್ಟು:ಬೈಕ್-ಕಾರು ಡಿಕ್ಕಿ, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ (ಕೆಎಸ್ಆರ್‌ಟಿಸಿ ಚಾಲಕ) ಮೃತ್ಯು