ಕರಾವಳಿ

ಪುತ್ತೂರು: ಗೃಹಿಣಿಯೊಬ್ಬರ ಮೃತದೇಹ ನೀರಿನ ತೊಟ್ಟಿಯೊಳಗೆ ಪತ್ತೆ, ಅಷ್ಟಕ್ಕೂ ನಡೆದಿದ್ದೇನು..?

222

ನ್ಯೂಸ್ ನಾಟೌಟ್: ವಿವಾಹಿತ ಮಹಿಳೆಯ ಮೃತದೇಹ ಮನೆಯ ಸಮೀಪದ ನೀರಿನ ತೊಟ್ಟಿಯೊಳಗೆ ಪತ್ತೆಯಾಗಿರುವ ಘಟನೆ ಬುಧವಾರ ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೈಕಾರ ಎಂಬಲ್ಲಿ ನಡೆದಿದೆ.

ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮಿ (೫೦) ಮೃತಪಟ್ಟ ಗೃಹಿಣಿ ಎಂದು ಗುರುತಿಸಲಾಗಿದೆ. ಮನೆಯ ಗುಡ್ಡದ ಮೇಲೆ ಮಣ್ಣಿನ ಟ್ಯಾಂಕಿ ನಿರ್ಮಿಸಿ ಅದಕ್ಕೆ ಟಾರ್ಪಾಲು ಹಾಕಿ ನೀರು ನಿಲ್ಲಿಸಿದ್ದ ತೊಟ್ಟಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಗುಡ್ಡದ ಮೇಲೆ ಹೋದ ಶುಭಲಕ್ಷ್ಮಿ ಅವರು ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಈ ನೀರಿನ ತೊಟ್ಟಿಗೆ ಬಿದ್ದಿದ್ದಾರೆ, ಆ ಭಾಗದಲ್ಲಿ ಯಾರೂ ಇಲ್ಲದ ಕಾರಣ ನೀರಿನ ತೊಟ್ಟಿಯಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಮಗಳು ಕಾಲೇಜಿಗೆ ತೆರಳಿದ್ದಳು. ಪುತ್ರ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದ. ಪತಿ ಪ್ರಕಾಶ್ಚಂದ್ರ ರೈ ಅವರು ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ.

ಈ ಘಟನೆಯ ಆರಂಭದಲ್ಲಿ ಮೃತದೇಹ ಪತ್ತೆಯಾದ ಬಗ್ಗೆ ಹಲವು ಅನುಮಾನಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿತ್ತು. ಆದರೆ ಇದು ಆಕಸ್ಮಿಕ ಸಾವು ಎಂದು ಅವರ ಕುಟುಂಬ ದೃಢಪಡಿಸಿದೆ. ಮೃತರು ಪತಿ, ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗದೆ. ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಗೋಪಾಲಕೃಷ್ಣ ಹೇರಳೆ, ಸಾಜ ರಾಧಾಕೃಷ್ಣ ಆಳ್ವ, ಶಶಿಕುಮಾರ್ ರೈ ಬಾಲ್ಯೊಟ್ಟು, ಅಪ್ಪಯ್ಯ ಮಣಿಯಾಣಿ, ಡಾ.ಪ್ರಸಾದ್ ಭಂಡಾರಿ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಜೀವಂದರ್ ಜೈನ್ ಮತ್ತಿತರು ಭಾಗವಹಿಸಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

See also  ಕೊಡಗು:'ಚಂದನ್ ಶೆಟ್ಟಿ'ಯ ಬಾಳ ಸಂಗಾತಿ ಇವರೇ ನೋಡಿ..! 'ನನ್ನ ಜೀವನವನ್ನು ಸುಂದರ ಮಾಡಿದ್ದಕ್ಕೆ ಥ್ಯಾಂಕ್ಯೂ' ಎಂದ 'ಸೀತಾ ವಲ್ಲಭ’ ನಟಿ ಸುಪ್ರೀತಾ!!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget