Latest

ಅತ್ತೆ ಸೊಸೆ ಜಗಳ;ಗಂಡನ ಬಿಟ್ಟು ತವರು ಮನೆಗೆ ಹೋದ ಪತ್ನಿ!! ಮನನೊಂದು ತಾಯಿ-ಮಗ ಆತ್ಮಹತ್ಯೆ!

491
Pc Cr: Public Tv
Spread the love

ನ್ಯೂಸ್‌ ನಾಟೌಟ್: ಮದುವೆಯಾಗಿ ಕೇವಲ ಎಂಟೇ ತಿಂಗಳಲ್ಲಿ ಯುವಕನ ಬಾಳು ಅಂತ್ಯಗೊಂಡಿದ್ದಲ್ಲದೇ ಆತನೊಂದಿಗೆ ಆತನ ತಾಯಿ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಗ್ಗೆ ವರದಿಯಾಗಿದೆ. ಕೌಟುಂಬಿಕ ಕಲಹ (Family Feud) ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಹಾಸನ (Hassan) ಜಿಲ್ಲೆ ಚನ್ನರಾಯಪಟ್ಟಣ (Channarayapatna) ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗ.

ಆಗಿದ್ದೇನು?

ಭರತ್ ಕಳೆದ ಎಂಟು ತಿಂಗಳ ಹಿಂದಷ್ಟೇ ಅರಸೀಕೆರೆ (Arasikere) ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದರು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೇ ಜಗಳ ನಡೆಯುತ್ತಿತ್ತು.ಇದೇ ಕಾರಣಕ್ಕೆ ಭರತ್ ಪತ್ನಿ ಮನೆಬಿಟ್ಟು ತವರು ಮನೆಗೆ ಹೋಗಿದ್ದರು. ಆದರೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡು ಬಾರಿ ರಾಜಿ ಪಂಚಾಯ್ತಿ ಮಾಡಿದ್ದರು. ಆದರೂ ಭರತ್ ಪತ್ನಿ ಗಂಡನ ಜೊತೆ ಇರದೇ ತವರು ಮನೆಗೆ ಹೋಗಿದ್ದರು. ಇದರಿಂದ ಮನನೊಂದಿದ್ದ ಭರತ್ ಹಾಗೂ ತಾಯಿ ಜಯಂತಿ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

See also  ಡ್ರಗ್‌ ಕೇಸ್‌ ನಲ್ಲಿ ಸ್ಯಾಂಡಲ್ ವುಡ್ ನಟಿಯರಿಗೆ ಮತ್ತೆ ಸಂಕಷ್ಟ..! ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಸಿಬಿ..!
  Ad Widget   Ad Widget   Ad Widget