ನ್ಯೂಸ್ ನಾಟೌಟ್: 2018ರಲ್ಲಿ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ನ ಜನಪ್ರತಿನಿಧಿಗಳ ನ್ಯಾಯಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಜೂ.26ರಂದು ಸ್ವತಃ ವಿಚಾರಣೆಗೆ ಹಾಜರಾಗಬೇಕು ಎಂದು ರಾಹುಲ್ ಗೆ ಕೋರ್ಟ್ ಸೂಚನೆ ನೀಡಿದೆ. ರಾಹುಲ್ ಗಾಂಧಿಗೆ ಸ್ವತಃ ಆಗಮಿಸುವುದಕ್ಕೆ ವಿನಾಯಿತಿ ನೀಡಬೇಕು ಎಂಬ ರಾಹುಲ್ ಮನವಿಯನ್ನು ತಿರಸ್ಕರಿಸಿದೆ. 2018ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಕೊ* ಲೆ ಆರೋಪ ಹೊತ್ತಿರುವವರು ಬಿಜೆಪಿಯ ಅಧ್ಯಕ್ಷರಾಗಿದ್ದಾರೆ ಎಂದು ಹೇಳಿದ್ದರು.
ಕೋರ್ಟ್ ಗೆ ಹಾಜರಾಗದಿದ್ದರೆ ಬಂಧಿಸಿ ಕರೆ ತರುವಂತೆ ವಾರಂಟ್ ನಲ್ಲಿ ತಿಳಿಸಲಾಗಿದೆ.