ದೇಶ-ಪ್ರಪಂಚದೇಶ-ವಿದೇಶರಾಜಕೀಯ

ರಾಯ್​ ಬರೇಲಿ, ವಯನಾಡ್ ಎರಡರಲ್ಲಿ ರಾಹುಲ್ ಆಯ್ಕೆ ಯಾವುದು..? ಈ ಬಗ್ಗೆ ಕಾಂಗ್ರೆಸ್ ತೀರ್ಮಾನವೇನು..?

ನ್ಯೂಸ್ ನಾಟೌಟ್ : 2024ರ ಲೋಕಸಭೆ ಹಣಾಹಣಿಯಲ್ಲಿ ರಾಯ್ ಬರೇಲಿ ಮತ್ತು ವಯನಾಡ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಉತ್ತರ ಮತ್ತು ದಕ್ಷಿಣದ ಈ ಎರಡು ಸ್ಥಾನಗಳಲ್ಲಿ ಒಂದನ್ನು ಬಿಡಬೇಕಾಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲೀಗ ಈ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆಯುತ್ತಿದ್ದು, ಆದರೆ ಈ ಬಗ್ಗೆ ಕಾಂಗ್ರೆಸ್‌ನಿಂದ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. 2019ರಲ್ಲಿ ದಿನೇಶ್ ಪ್ರತಾಪ್ ಸಿಂಗ್ ವಿರುದ್ಧ ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ 1,67,178 ಮತಗಳ ಅಂತರದಿಂದ ಗೆದ್ದಿದ್ದರು.

2019ರಲ್ಲಿ ದಿನೇಶ್ ಪ್ರತಾಪ್ ಸಿಂಗ್ ವಿರುದ್ಧ ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ 1,67,178 ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿಯೂ ಬಿಜೆಪಿಯಿಂದ ದಿನೇಶ್ ಪ್ರತಾಪ್ ಸಿಂಗ್ ರಾಯ್ ಬರೇಲಿಯಿಂದ ಸ್ಪರ್ಧಿಸಿದ್ದು, ರಾಹುಲ್​ ಗಾಂಧಿ ಅತ್ಯಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಕಂಡಿದ್ದಾರೆ. ಇನ್ನೂ, 2019ರಲ್ಲಿ ರಾಹುಲ್ ಗಾಂಧಿ ಅಮೇಥಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಆಗ ಬಿಜೆಪಿಯ ಸ್ಮೃತಿ ಇರಾನಿಯವರಿಂದ ಹೀನಾಯ ಸೋಲನ್ನು ಎದುರಿಸಬೇಕಾಯಿತು.

2024ರ ಈ ಚುನಾವಣೆಯಲ್ಲಿ ತಾಯಿ ಸೋನಿಯಾ ಗಾಂಧಿಯವರ ಸ್ಥಾನದಿಂದ ಚುನಾವಣೆಗೆ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್ ಅವರನ್ನು 3,90,030 ಮತಗಳ ಅಂತರದಿಂದ ಸೋಲುಣಿಸುವ ಮೂಲಕ ದೇಶಕ್ಕೆ ಉತ್ತರ ಕೊಟ್ಟಿದ್ದಾರೆ. ಇನ್ನೂ ವಯನಾಡ್ ಲೋಕಸಭಾ ಕ್ಷೇತ್ರವನ್ನು ಗಮನಿಸಿದರೆ, ಬಂಪರ್ ಗೆಲುವು ಸಾಧಿಸಿದ್ದಾರೆ. ಸದ್ಯ ಈ ಎರಡರ ಪೈಕಿ ಯಾವ ಸ್ಥಾನವನ್ನು ರಾಹುಲ್ ಗಾಂಧಿ ಉಳಿಸಿಕೊಳ್ಳುತ್ತಾರೆ ಎಂಬ ಪ್ರಶ್ನೆ ಎದ್ದಿದೆ. ನಿನ್ನೆ ದೆಹಲಿಯಲ್ಲಿ ಪತ್ರಕರ್ತರು ಈ ಬಗ್ಗೆ ಪ್ರಶ್ನೆಗಳನ್ನು ಕೇಳಿದಾಗ ನಗುತ್ತಲೇ ಉತ್ತರಿಸಿದ ಅವರು, ‘ವಯನಾಡ್ ಅಥವಾ ರಾಯ್​ ಬರೇಲಿ ಸೇರಿ ಎರಡರ ಪೈಕಿ ಯಾವ ಕ್ಷೇತ್ರದಿಂದ ಸಂಸದನಾಗುತ್ತೀರಿ ಎಂದು ನನ್ನನ್ನು ಕೇಳಲಾಗುತ್ತಿದೆ. ನಾನು ಎರಡೂ ಸ್ಥಳಗಳಿಂದ ಸಂಸದನಾಗಿ ಉಳಿಯಲು ಬಯಸುತ್ತೇನೆ. ನಿಮಗೆಲ್ಲರಿಗೂ ಅಭಿನಂದನೆಗಳು’ ಎಂದು ತಿಳಿಸಿದರು. ಎರಡೂ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಲು ಇಚ್ಛಿಸಿದರೂ ಕೂಡ ಅಸಹಾಯಕ ಪರಿಸ್ಥಿತಿ ಇದೆ ಎಂಬುದಾಗಿಯೂ ತಿಳಿಸಿದ್ದಾರೆ.

Click 👇

https://newsnotout.com/2024/06/n-chandrababu-naidu-oath-delayed-for-political-reason
https://newsnotout.com/2024/06/loka-sabha-election-and-bjp-ministers-are-lost-thair-majority
https://newsnotout.com/2024/06/mangaluru-bhajaragadala-and-congress-issue-at-celebration
https://newsnotout.com/2024/06/x-tweeter-and-its-rules-on-users-kannada-news

Related posts

ಹಿಂದೂ -ಮುಸ್ಲಿಂ ಸಂಘರ್ಷದ ಕಥೆಯುಳ್ಳ ‘ಬೇರ’ ಸಿನಿಮಾದ ಟೀಸರ್ ನೋಡಿ ‘ಯಾರಿಗೆ ಯಾರನ್ನು ಕೊಲ್ಲುವ ಹಕ್ಕೂ ಇಲ್ಲ’ ಎಂದು ಕಣ್ಣೀರಿಟ್ಟ ಪ್ರವೀಣ್ ನೆಟ್ಟಾರ್ ಪತ್ನಿ

ಗರಿ ಗರಿಯ ನೋಟುಗಳಿಗೆ ಬೆಂಕಿ ಹಚ್ಚಿ ದೀಪಾವಳಿಗೆ ಶುಭಕೋರಿದ್ದ ಭೂಪ..! ಇಲ್ಲಿದೆ ವೈರಲ್ ವಿಡಿಯೋ

ಸಭೆಯ ವೇಳೆ ಅಸ್ವಸ್ಥಗೊಂಡಿದ್ದ ಖರ್ಗೆ, ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ, ಮೋದಿಯನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂದ ಖರ್ಗೆ..!