ನ್ಯೂಸ್ ನಾಟೌಟ್: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರೈ ಎಸ್ಟೇಟ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯಲಿರುವ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಯಾವುದೇ ಟೋಕನ್ ವ್ಯವಸ್ಥೆ ಇರುವುದಿಲ್ಲ ಎಂದು ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ತಿಳಿಸಿದ್ದಾರೆ.
ನ.13 ಸೋಮವಾರ ಕೊಂಬೆಟ್ಟು ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ರೈ ಎಸ್ಟೇಟ್ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾರ್ವಜನಿಕರಿಗೆ ವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಲಿದೆ. ಸುಮಾರು 15 ಕೌಂಟರುಗಳನ್ನು ತೆರೆಯಲಾಗಿದೆ. ಇದರಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗವಹಿಸಲಿದ್ದಾರೆ. ಹೀಗೆ ಭಾಗವಹಿಸುವವರಿಗೆ ಯಾವುದೇ ಟೋಕನ್ ವ್ಯವಸ್ಥೆ ಇರುವುದಿಲ್ಲ. ನೇರವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸುದೇಶ್ ಶೆಟ್ಟಿ ಮನವಿ ಮಾಡಿಕೊಂಡಿದ್ದಾರೆ.