ಕ್ರೈಂವೈರಲ್ ನ್ಯೂಸ್

ರೈಲಿನಿಂದ ಇಳಿಯುವಾಗ ಬಿದ್ದರೆ ರೈಲ್ವೆಯೇ ಇಲಾಖೆಯೇ ಹೊಣೆ ಎಂದ ಹೈಕೋರ್ಟ್, ರೈಲ್ವೇ ಇಲಾಖೆಯ ವಾದವೇನು..?

221

ನ್ಯೂಸ್ ನಾಟೌಟ್: ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಕೊನೆಯುಸಿರೆಳೆದ ಪ್ರಯಾಣಿಕರ ಕುಟುಂಬಕ್ಕೆ ಪರಿಹಾರ ನೀಡುವ ಹೊಣೆ ರೈಲ್ವೆ ಇಲಾಖೆಯದ್ದೇ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಅಸುನೀಗಿದ ಮಹಿಳೆಯ ಕುಟುಂಬಕ್ಕೆ ವಾರ್ಷಿಕ ಶೇ.7 ಬಡ್ಡಿಯೊಂದಿಗೆ 4 ಲಕ್ಷ ರೂ. ಪರಿಹಾರ ಪಾವತಿಸುವಂತೆ ರೈಲ್ವೆ ಇಲಾಖೆಗೆ ಆದೇಶ ಹೊರಡಿಸಿದೆ. ಇದರಿಂದಾಗಿ ನ್ಯಾಯಾಲಯದ ಮೊರೆ ಹೋಗಿದ್ದವರಿಗೆ ಪರಿಹಾರ ಸಿಕ್ಕಂತಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ನಿವಾಸಿ ರೋಜಮಣಿ ಹಾಗೂ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಚ್. ಪಿ. ಸಂದೇಶ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ತೀರ್ಪು ನೀಡಿದೆ.

ಜಯಮ್ಮ ಕೊನೆಯುಸಿರೆಳೆದದ್ದಕ್ಕೆ ರೈಲ್ವೆಯಿಂದ 8 ಲಕ್ಷ ರೂ. ಪರಿಹಾರ ಕೋರಿದ್ದರು. ಆದೇಶದಲ್ಲಿ ಪೀಠವು ಪತ್ರಿವಾದಿಗಳು 4 ಲಕ್ಷ ರೂ.ಗಳನ್ನು ವಾರ್ಷಿಕ ಶೇ.7 ಬಡ್ಡಿಯೊಂದಿಗೆ ಪಾವತಿಸುವಂತೆ ಹೇಳಿದೆ. ಈ ಒಟ್ಟು ಮೊತ್ತ 8 ಲಕ್ಷ ರೂ. ತಲುಪದೆ ಹೋದಲ್ಲಿ ಪ್ರತಿವಾದಿಗಳು ಅರ್ಜಿದಾರರ ಮನವಿಯಂತೆ 8 ಲಕ್ಷ ರೂ. ಪಾವತಿಸಬೇಕು ಎಂದು ನ್ಯಾಯಪೀಠ ಹೇಳಿದೆ. ಅರ್ಜಿದಾರ ಪರ ವಕೀಲರು, ಮೃತ ಜಯಮ್ಮ ತನ್ನ ಸಹೋದರಿಯೊಂದಿಗೆ ತಪ್ಪಾಗಿ ಬೇರೊಂದು ರೈಲು ಹತ್ತಿದ್ದರು. ಇದು ಗೊತ್ತಾಗಿ ಆಕೆ ಕೆಳಗಿಳಿಯುವ ವೇಳೆ ರೈಲು ಚಲಿಸಲು ಆರಂಭಿಸಿತ್ತು.

ಆಗ ನಿಯಂತ್ರಣ ಕಳೆದುಕೊಂಡು ಆಕಸ್ಮಿಕವಾಗಿ ಕೆಳಗೆ ಬಿದ್ದು ಕೊನೆಯುಸಿರೆಲೆದಿದ್ದರು. ಇದನ್ನು ಪರಿಗಣಿಸಿ ಆಕೆಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ನಿರ್ದೇಶಿಸುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದ್ದರು ಎನ್ನಲಾಗಿದೆ. ಆದರೆ, ಈ ಘಟನೆ ಆಕಸ್ಮಿಕವಾಗಿ ನಡೆದಿದ್ದಲ್ಲ, ಉದ್ದೇಶಪೂರ್ವಕ ಎಂದು ರೈಲ್ವೆ ಇಲಾಖೆ ಹೇಳಿದರೂ ಅದಕ್ಕೆ ಸಾಕ್ಷ್ಯಾಧಾರ ಒದಗಿಸದ ಕಾರಣ ಇದನ್ನು ಗಂಭೀರವಾಗಿ ಪರಿಗಣಿಸಿ ರೈಲ್ವೆ ಹಕ್ಕುಗಳ ನ್ಯಾಯಮಂಡಳಿ ಹೊರಡಿಸಿರುವ ಆದೇಶವನ್ನು ತಳ್ಳಿಹಾಕುವಂತೆ ಅರ್ಜಿದಾರರು ವಾದಿಸಿದ್ದರು. ಮಹಿಳೆ ತಪ್ಪಾಗಿ ಬೇರೊಂದು ರೈಲು ಹತ್ತಿದ್ದರು. ಆಗ ಅವರು ಒಂದೋ ಪ್ರಯಾಣ ಮುಂದುವರಿಸಿ ಮುಂದಿನ ನಿಲ್ದಾಣದಲ್ಲಿ ಇಳಿಯಬೇಕು. ಇಲ್ಲವೇ ಅಲಾರ್ಮ್ ಚೈನ್ ಎಳೆಯಬೇಕು. ಅದೆರಡನ್ನೂ ಮಾಡದೆ ರೈಲಿನಿಂದ ಇಳಿಯಲು ಪ್ರಯತ್ನಿಸಿ ಸ್ವಯಂಪ್ರೇರಿತ ಮತ್ತು ಉದ್ದೇಶಪೂರ್ವಕವಾಗಿ ಜಿಗಿದಿದ್ದಾರೆ. ಹೀಗಾಗಿ ಘಟನೆ ಆಕಸ್ಮಿಕವಾಗಿ ಸಂಭವಿಸಿದೆ ಎನ್ನಲಾಗದು. ಆದ್ದರಿಂದ ರೈಲ್ವೆ ಕಾಯ್ದೆಯ ಸೆಕ್ಷನ್ 123(ಇ) ಅನ್ವಯ ಪರಿಹಾರ ಕಲ್ಪಿಸಲು ಸಾಧ್ಯವಿಲ್ಲ ಎಂದು ರೈಲ್ವೆ ಇಲಾಖೆ ಪ್ರತಿವಾದ ಮಂಡಿಸಿತ್ತು ಎನ್ನಲಾಗಿದೆ.

See also  ಸಂಪಾಜೆಯ ನಿವೃತ್ತ ಪ್ರಾಂಶುಪಾಲರ ಮನೆಯಿಂದ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದ ಕಳ್ಳರು..! ಯಾರೂ ಇಲ್ಲದ ವೇಳೆ ಮನೆ ಬಾಗಿಲನ್ನೇ ಮುರಿದು ನುಗ್ಗಿ ದೋಚಿ ಪರಾರಿ..! ವಿಡಿಯೋ ವೀಕ್ಷಿಸಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget