ಬೆಂಗಳೂರುಮಂಗಳೂರುರಾಜ್ಯವೈರಲ್ ನ್ಯೂಸ್

ರಾಜ್ಯದ 8 ರೈಲುಗಳ ಸಂಚಾರ 8 ದಿನಗಳ ಕಾಲ ರದ್ದು..! ಹಲವು ರೈಲುಗಳ ಮಾರ್ಗ ಬದಲಾವಣೆ,ಇಲ್ಲಿದೆ ಸಂಪೂರ್ಣ ಮಾಹಿತಿ

187

ನ್ಯೂಸ್ ನಾಟೌಟ್ : ಬೆಂಗಳೂರು ನಗರದಿಂದ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರವನ್ನು ತಾಲ್ಕಾಲಿಕವಾಗಿ ಒಂದು ವಾರದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ.

ನಿಟ್ಟೂರು ಮತ್ತು ಸಂಪಿಗೆ ರಸ್ತೆ ರೈಲು ನಿಲ್ದಾಣಗಳ ನಡುವಿನ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಯಲ್ಲಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಸಂಚರಿಸುವ ಒಟ್ಟು ಎಂಟು ರೈಲುಗಳ ಸಂಚಾರವನ್ನು ರದ್ದು ಮಾಡಿ ನೈಋತ್ಯ ರೈಲ್ವೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ರೈಲ್ವೆ ಮೇಲ್ಸೇತುವೆಗೆ ಗರ್ಡರ್‌ಗಳನ್ನು ಅಳವಡಿಸುವ ಕಾಮಗಾರಿ ಆರಂಭವಾಗಲಿದೆ. ಹೀಗಾಗಿ ಅ.17 ರಿಂದ 24ರವರೆಗೆ ಅಂದರೆ ಒಂದು ವಾರಗಳ ಕಾಲ ಈ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇನ್ನೂ ಕೆಲವು ರೈಲುಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
ರೈಲು ಸಂಖ್ಯೆ: 07346 ತುಮಕೂರು-ಚಾಮರಾಜನಗರ ಪ್ಯಾಸೆಂಜರ್​​, ರೈಲು ಸಂಖ್ಯೆ: 07328 ಚಾಮರಾಜನಗರ-ಮೈಸೂರು ಪ್ಯಾಸೆಂಜರ್​, ರೈಲು ಸಂಖ್ಯೆ: 16239 ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್, ರೈಲು ಸಂಖ್ಯೆ: 16240 ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್, ರೈಲು ಸಂಖ್ಯೆ: 06576 ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು, ರೈಲು ಸಂಖ್ಯೆ: 06575 ಕೆಎಸ್​ಆರ್​ ಬೆಂಗಳೂರು-ತುಮಕೂರು ಮೆಮು, ರೈಲು ಸಂಖ್ಯೆ: 16579 ಯಶವಂತಪುರ-ಶಿವಮೊಗ್ಗ ಟೌನ್​

ಇನ್ನು ಕೆಲವು ರೈಲುಗಳ ಮಾರ್ಗ ಬದಲಾವಣೆಯ ವಿವರ ಇಲ್ಲಿದೆ. ರೈಲು ಸಂಖ್ಯೆ: 17310 ವಾಸ್ಕೋ ಡ ಗಾಮಾ-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗವಾಗಿ ಸಂಚರಿಸುತ್ತದೆ. ರೈಲು ಸಂಖ್ಯೆ: 22687 ಮೈಸೂರು-ವಾರಣಾಸಿ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸುತ್ತದೆ. ರೈಲು ಸಂಖ್ಯೆ: 82653 ಯಶವಂತಪುರ-ಜೈಪುರ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸುತ್ತದೆ. ರೈಲು ಸಂಖ್ಯೆ: 19668 ಮೈಸೂರು-ಉದಯಪುರ ಸಿಟಿ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ, ದಾವಣಗೆರೆ ಮಾರ್ಗವಾಗಿ ಸಂಚರಿಸುತ್ತದೆ. ರೈಲು ಸಂಖ್ಯೆ: 17326 ಮೈಸೂರು-ಬೆಳಗಾವಿ ಎಕ್ಸ್​ಪ್ರೆಸ್​ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸಿಕೆರೆ ಮಾರ್ಗವಾಗಿ ಸಂಚರಿಸುತ್ತದೆ.

Click

https://newsnotout.com/2024/10/covid-shield-kannada-news-supreme-court-viral-news/
See also  ಹೆಣ್ಣಿನ ಮೇಲೆ ಆಸೆಯಾದರೆ ನಮ್ಮ ಬಳಿ ಬನ್ನಿ, ದುಡಿದು ಬದುಕೋ ಮಹಿಳೆಯರ ಜೀವನ ಹಾಳು ಮಾಡ್ಬೇಡಿ ಎಂದ ಮಹಿಳೆ..! ಇಲ್ಲಿದೆ ವೈರಲ್ ವಿಡಿಯೋ
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget