ಚಿಕ್ಕಮಗಳೂರುವೈರಲ್ ನ್ಯೂಸ್

ಮಳೆ ಬರುತ್ತಿಲ್ಲವೆಂದು ತಡರಾತ್ರಿ ನಿಗೂಢವಾಗಿ ಮಕ್ಕಳಿಗೆ ಮದುವೆ ಮಾಡಿಸಿದ ಗ್ರಾಮಸ್ಥರು..! ಏನಿದು ವಿಚಿತ್ರ ಮದುವೆ?

185

ನ್ಯೂಸ್ ನಾಟೌಟ್ : ಮಳೆ ಬಾರದಂತಹ ಸಂದರ್ಭದಲ್ಲಿ ಈ ರೀತಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದು. ಹೀಗಾಗಿ ಮಕ್ಕಳ ಮದುವೆ ಮಾಡಿಸಿದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ.

ಮಳೆಗಾಗಿ ಮಕ್ಕಳ ಅಣಕು ಮದುವೆ ಮಾಡಿಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ ಎನ್ನುವುದು ವಿಶೇಷ.
ಗ್ರಾಮದ ಇಬ್ಬರು ಬಾಲಕರಲ್ಲಿ ಒಬ್ಬ ಹುಡುಗನಿಗೆ ವಧು ವೇಷ ಹಾಕಿ ಮತ್ತೋರ್ವ ಹುಡುಗನಿಗೆ ವರನ ಪೋಷಾಕು ಹಾಕಿ ಶಾಸ್ತ್ರೋಕ್ತವಾಗಿ ಅರ್ಚಕರ ನೇತೃತ್ವದಲ್ಲಿ ಅಣಕು ಮದುವೆ ಮಾಡುವ ಮೂಲಕ ಮಳೆಗಾಗಿ ಗ್ರಾಮಸ್ಥರು ಮೊರೆಯಿಟ್ಟಿದ್ದಾರೆ ಎನ್ನುವುದು ವಿಚಿತ್ರ.

ಗ್ರಾಮದ ಮಧ್ಯಭಾಗದ ಬೀದಿಯಲ್ಲಿ ಮಹಿಳೆಯರೆಲ್ಲ ಕೂತು ಸೋಬಾನೆ ಗೀತೆ ಹಾಡಿ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಚಿಕ್ಕ ಬಾಲಕರು ವರ-ವಧುವಿನಂತೆ ಕಂಗೊಳಿಸಿದ್ದಾರೆ. ವರನ ಪೋಷಾಕುನಲ್ಲಿದ್ದ ಬಾಲಕ ವಧು ವೇಷದಲ್ಲಿದ್ದ ಮತ್ತೋರ್ವ ಬಾಲಕನಿಗೆ ಅರಿಶಿನ ಕೊಂಬು (ತಾಳಿ) ಕಟ್ಟುವ ಮೂಲಕ ಮದುವೆ ಮಾಡಲಾಗಿದೆ ಎಂದು ವರದಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿ ನೀರಿಕ್ಷಿಸಿದಷ್ಟು ಮಳೆ ಬಾರದೆ ಇದ್ದುದರಿಂದ ರಾಗಿ, ಮೆಕ್ಕೆಜೋಳ, ಅವರೆ, ತೊಗರಿ ಸೇರಿದಂತೆ ಮಳೆಯಾಶ್ರಿತ ಬೆಳೆಗಳೆಲ್ಲವೂ ಒಣಗಿ ಬಾಡಿ ಹೋಗುತ್ತಿವೆ. ಹೀಗಾಗಿ ಜನರು ಊರ ಹಿರಿಯರು ಹೇಳಿದಂತೆ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ.

See also  ಭಾರತದಲ್ಲಿ 500 ಉದ್ಯೋಗಿಗಳನ್ನು ವಜಾಗೊಳಿಸಿದ ಅಮೆಜಾನ್‌! ಇಲ್ಲಿದೆ ನೈಜ ಕಾರಣ!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget