ಕರಾವಳಿಸುಳ್ಯ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಬಿರುಗಾಳಿ, ಭಾರಿ ಮಳೆಯ ಭೀತಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ

287

ನ್ಯೂಸ್ ನಾಟೌಟ್: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ 4 ದಿನ ಮಳೆಯಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪ್ರವಾಸಿಗರು, ಸ್ಥಳೀಯರು ಸಮುದ್ರ, ನದಿ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ತಗ್ಗುಪ್ರದೇಶದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಚಂಡಮಾರುತದ ಸಾಧ್ಯತೆ ಬಗ್ಗೆ ಉಡುಪಿ ಜಿಲ್ಲಾಡಳಿತ ಮಾಧ್ಯಮ ಪ್ರಕಟಣೆ ನೀಡಿದೆ.
ಈ ಮಧ್ಯೆ, ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಮಂಗಳವಾರ ಮಧ್ಯಾಹ್ನ ತುಸು ಮಳೆಯಾಗಿದೆ. ಮುಂದಿನ 3 ಗಂಟೆಗಳಲ್ಲಿ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿನ ವಿಪತ್ತು ನಿಯಂತ್ರಣ ಕೇಂದ್ರ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದೆ.

ಮುಂಗಾರು ಮಾರುತಗಳು ಕೇರಳಕ್ಕೆ ಇನ್ನೂ ಪ್ರವೇಶಿಸದ ಕಾರಣ ಕರ್ನಾಟಕದಲ್ಲಿ ಮುಂಗಾರು ಮಳೆ ತಡವಾಗಿ ಆರಂಭವಾಗಲಿದೆ. ಆದಾಗ್ಯೂ, ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಸೋಮವಾರ ಹೇಳಿದ್ದರು. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿ ಬೀಸಲಿದ್ದು, ಗಂಟೆಗೆ 40 ರಿಂದ 45 ಕಿ.ಮೀ. ಇಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಕರಾವಳಿ ತೀರದ ಜನರು ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.

See also  ಪುತ್ತೂರು: ಅತಿಥಿ ಶಿಕ್ಷಕಿಯಿಂದ ವಿದ್ಯಾರ್ಥಿ ಮೇಲೆ ಹಲ್ಲೆ! ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿ!
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget