ಬೆಂಗಳೂರು:-ರಾಜ್ಯದಲ್ಲಿ ಮಳೆ ಇದೀಗ ಕೊಂಚ ಕಡಿಮೆಯಾಗಿದೆ. ಹಾಗಂತ ಸಂಪೂರ್ಣವಾಗಿ ಕಡಿಮೆಯಾಗುವ ಲಕ್ಷಣ ಸದ್ಯಕ್ಕಿಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಲ್ಕು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ, ದಕ್ಷಿಣ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.