ಕ್ರೀಡೆ/ಸಿನಿಮಾಬೆಂಗಳೂರುವೈರಲ್ ನ್ಯೂಸ್ಸಿನಿಮಾ

ನಟ ಸಾರ್ವಭೌಮನ ಹುಟ್ಟುಹಬ್ಬದಂದು ಸ್ಮಾರಕಕ್ಕೆ ಕುಟುಂಬಸ್ಥರಿಂದ ಪೂಜೆ, ಅಪಾರ ಸಂಖ್ಯೆಯಲ್ಲಿ ಸೇರಿದ ಡಾ.ರಾಜ್ ಅಭಿಮಾನಿಗಳು

248

ನ್ಯೂಸ್ ನಾಟೌಟ್: ನಟ ಸಾರ್ವಬೌಮನ ಡಾ.ರಾಜ್‌ಕುಮಾರ್ (Rajkumar) ಅವರ 95ನೇ ಹುಟ್ಟುಹಬ್ಬದಂದು ಕಂಠೀರವ ಸ್ಟುಡಿಯೋ ಭೇಟಿ ನೀಡಿ ಸ್ಮಾರಕಕ್ಕೆ ಕುಟುಂಬಸ್ಥರು (Family) ಪೂಜೆ ಸಲ್ಲಿಸಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್‌ಕುಮಾರ್ ಸ್ಮಾರಕದ ಬಳಿ ರಾಘವೇಂದ್ರ ರಾಜ್‌ಕುಮಾರ್, ಪತ್ನಿ ಮಂಗಳ, ಡಾ.ರಾಜ್ ಪುತ್ರಿ ಲಕ್ಷ್ಮಿ ದಂಪತಿ, ಅಶ್ವಿನಿ ರಾಜ್‌ಕುಮಾರ್ (Ashwini Puneeth Rajkumar), ಪುತ್ರಿ ವಂದಿತಾ ಆಗಮಿಸಿದ್ದಾರೆ.

ಡಾ.ರಾಜ್ ಸ್ಮಾರಕಕ್ಕೆ ಕುಟುಂಬಸ್ಥರಿಂದ ಪೂಜೆ ಸಲ್ಲಿಸಿದ್ದಾರೆ. ಅಂದಹಾಗೆ, ಈ ವೇಳೆ ಹೊನ್ನವಳ್ಳಿ ಕೃಷ್ಣ ಭಾಗಿಯಾಗಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದರು. ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬ. ಇಂದಿನ ಅವರ 95ನೇ ವರ್ಷದ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿಸಲು ನಾನಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ ಅವರ ಅಭಿಮಾನಿಗಳು. ಕರ್ನಾಟಕ ಸರಕಾರ ಮತ್ತು ಡಾ.ರಾಜ್ ಕುಮಾರ್ ಸ್ಮಾರಕ ಟ್ರಸ್ಟ್ ಪ್ರತಿ ವರ್ಷದಂತೆ ಈ ವರ್ಷವೂ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರತಿ ವರ್ಷದಂತೆ ಈ ಸಲವೂ ಡಾ.ರಾಜ್ ಪುಣ್ಯಭೂಮಿ ಸ್ಥಳದಲ್ಲಿ ಅಭಿಮಾನಿಗಳು ರಕ್ತದಾನ ಶಿಬಿರ, ಕಣ್ಣುದಾನ ಶಿಬಿರ, ಅನ್ನ ಸಂತರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಳ್ಳುತ್ತಿದ್ದಾರೆ. ಬೆಳಗ್ಗೆಯಿಂದಲೇ ಈ ಎಲ್ಲ ಕೆಲಸಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋದ ಆವರಣದಲ್ಲೇ ಶುರುವಾಗಲಿವೆ.

See also  ಪತ್ನಿಯನ್ನು ಕೊಂದು ಸೂಟ್‌ ಕೇಸ್‌ ನಲ್ಲಿ ತುಂಬಿದ್ದ ಪತಿ ಅರೆಸ್ಟ್..! ಬಾಡಿಗೆ ಮನೆಯಲ್ಲಿದ್ದವರ ಭೀಕರ ಕ್ರೈಂ ಕಹಾನಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget