ಕರಾವಳಿಕ್ರೈಂಸಿನಿಮಾ

ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರದ ಖಳನಟ ಅರೆಸ್ಟ್..! ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಭದ್ರತಾ ಪಡೆಗಳು..!

247

ನ್ಯೂಸ್‌ ನಾಟೌಟ್:‌ ಖ್ಯಾತ ನಟ ವಿನಾಯಕನ್ ಇತ್ತೀಚೆಗೆ ವಿವಾದವೊಂದರಲ್ಲಿ ಸಿಲುಕಿದ್ದಾರೆ. ಸೂಪರ್‌ಸ್ಟಾರ್ ರಜನಿಕಾಂತ್ ಅವರ ‘ಜೈಲರ್’ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ನಟನನ್ನು ವಿಮಾನ ನಿಲ್ದಾಣದಲ್ಲಿ ಕುಡಿದು ಗಲಾಟೆ ಮಾಡಿದ್ದಾರೆ ಎಂದು ಬಂಧಿಸಲಾಗಿದೆ.

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಅಲ್ಲಿ ಆತನ ಕುಡಿತದ ಸ್ಥಿತಿ ಮತ್ತು ಅಸಂಬದ್ಧ ವರ್ತನೆಯು ಭದ್ರತಾ ಪಡೆಗಳು ಕ್ರಮ ಕೈಗೊಳ್ಳುವಂತೆ ಮಾಡಿದೆ. ವಿನಾಯಕನ್ ಮದ್ಯ ಸೇವಿಸಿ ವಿಮಾನ ನಿಲ್ದಾಣವನ್ನು ತಲುಪಿದ್ದು ಅಲ್ಲಿ ತುಂಬಾ ಅಸಭ್ಯವಾಗಿ ವರ್ತಿಸಿದ್ದರು ಎಂದು ಹೇಳಲಾಗುತ್ತಿದೆ.

CISF (ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್) ಜೊತೆಗೆ ವಾಗ್ವಾದ ನಡೆಸಿದ್ದು ಭದ್ರತಾ ತಪಾಸಣೆಗೆ ಅಡ್ಡಿಪಡಿಸಿದರು. ಅವರ ಅನಿರೀಕ್ಷಿತ ವರ್ತನೆಯು ವಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆಯನ್ನು ಸೃಷ್ಟಿಸಿತು. ಇತರ ಪ್ರಯಾಣಿಕರು ಸಹ ಅನಾನುಕೂಲತೆಯನ್ನು ಎದುರಿಸಬೇಕಾಯಿತು. ಸದ್ಯ ವಿನಾಯಕ್ ಟಿಕೆಯನ್ನು ಠಾಣೆಗೆ ಕರೆದೊಯ್ದಿದ್ದು, ಆತನನ್ನು ವಿಚಾರಣೆಗೊಳಪಡಿಸಲಾಗಿದೆ. ಘಟನೆಯ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದರು.

Click

https://newsnotout.com/2024/09/ganapti-pooje-kannada-ddfnews-conflict-for-money-family-issue-karavara/
See also  ಸುಳ್ಯ: ಎನ್ನೆಂಸಿಯಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ, ಹಲವು ಗಣ್ಯರ ಉಪಸ್ಥಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget