ನ್ಯೂಸ್ ನಾಟೌಟ್: ಪಾಕಿಸ್ತಾನದೊಂದಿಗೆ ನಡೆಯುತ್ತಿರುವ ಸಂಘರ್ಷ ಮತ್ತು ಉದ್ವಿಗ್ನ ಪರಿಸ್ಥಿತಿ ಮಧ್ಯೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು(ಮೇ.9) ಶುಕ್ರವಾರ ಬೆಳಗ್ಗೆ ಸೌತ್ ಬ್ಲಾಕ್ ನಲ್ಲಿ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಮುಖ್ಯಸ್ಥರು. ಗಡಿಯಲ್ಲಿ ಇತ್ತೀಚಿನ ಬೆಳವಣಿಗೆಗಳು ಮತ್ತು ಕಾರ್ಯತಂತ್ರದ ಕುರಿತು ರಾಜನಾಥ್ ಸಿಂಗ್ ಗೆ ವಿವರಿಸಿದ್ದಾರೆ.
‘ಆಪರೇಷನ್ ಸಿಂದೂರ್’ ಇನ್ನೂ ಮುಂದುವರೆದಿದ್ದು, ಪಾಕಿಸ್ತಾನದಿಂದ ಯಾವುದೇ ಪ್ರಚೋದನೆ ಅಥವಾ ಉಲ್ಬಣಕ್ಕೆ ಪ್ರತಿಕ್ರಿಯಿಸಲು ಭಾರತೀಯ ಸೇನೆಯು ಹೆಚ್ಚಿನ ಜಾಗರೂಕತೆಯಿಂದ ಇದೆ ಎಂದು ಅವರು ಒತ್ತಿ ಹೇಳಿದ್ದಾರೆ.
Raksha Mantri Shri @rajnathsingh today chaired a high-level meeting at South Block, New Delhi to review the security situation along the western border and operational preparedness of the Indian #ArmedForces. Chief of Defence Staff General Anil Chauhan, Chief of the Army Staff… pic.twitter.com/M9MtlyVYAJ
— Ministry of Defence, Government of India (@SpokespersonMoD) May 9, 2025
ನಮ್ಮ ಸೈನಿಕರು ಕದನವನ್ನು ಉಲ್ಬಣಗೊಳಿಸುವ ಉದ್ದೇಶವಿಲ್ಲ, ಆದರೆ ಶತ್ರು ಪಡೆಗಳು ಮತ್ತೆ ದಾಳಿ ಮಾಡಿದರೆ, ನಾವು ಪ್ರತೀಕಾರ ತೀರಿಸಿಕೊಳ್ಳಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.
ರಕ್ಷಣಾ ಸಚಿವರೊಂದಿಗೆ ಇಂದಿನ ಸಭೆಯಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ, ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಮತ್ತು ರಕ್ಷಣಾ ಕಾರ್ಯದರ್ಶಿ ಆರ್ ಕೆ ಸಿಂಗ್ ಸೇರಿದಂತೆ ಸೇನಾ ಉನ್ನತ ಅಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳು ಇದ್ದರು.