Uncategorized

ರಾಜ್ಯ ಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಡಾ.ಡಿ. ವೀರೇಂದ್ರ ಹೆಗ್ಗಡೆ

ನ್ಯೂಸ್ ನಾಟೌಟ್: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಗುರುವಾರ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಎಂಬ ಹೆಸರಿನ ನಾನು, ರಾಜ್ಯಸಭೆಯ ಸದಸ್ಯನಾಗಿ ನಾಮನಿರ್ದೇಶನ ಹೊಂದಿದವನಾಗಿ, ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಕೈಗೊಳ್ಳಲಿರುವ ಕಾರ್ಯಗಳನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಪ್ರಮಾಣ ಮಾಡಿದರು. ಈ ತಿಂಗಳ ಆರಂಭದಲ್ಲಿ ವೀರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ಇಳೆಯರಾಜಾ ಹಾಗೂ ಪಿಟಿ ಉಷಾ ಕೂಡಾ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು.

Related posts

ಮ್ಯಾಂಡಸ್ ಚಂಡಮಾರುತ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆಯಿಂದ ಸೂಚನೆ:ಯಾವೆಲ್ಲ ಆಹಾರಗಳನ್ನು ಸೇವಿಸಬೇಕು?

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬಜೆಟ್ : ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಘೋಷಣೆ