ಕ್ರೈಂವೈರಲ್ ನ್ಯೂಸ್

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್‌ ನಲ್ಲಿ ಮಹತ್ವದ ಸುಳಿವು..! ಬಾಂಬರ್‌ ಬಳ್ಳಾರಿಯಿಂದ ಭಟ್ಕಳಕ್ಕೆ ತೆರಳಿದ್ದಾನಾ..?

ನ್ಯೂಸ್ ನಾಟೌಟ್: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ (Bengaluru) ಸುಜಾತ ಸರ್ಕಲ್‌ನಲ್ಲಿ ಬಾಂಬರ್ ಬಸ್ ಹತ್ತಿ ತುಮಕೂರಿನಲ್ಲಿ ಇಳಿದಿದ್ದಾನೆ.

ತುಮಕೂರಿನಿಂದ ಬಳ್ಳಾರಿಗೆ ಬಸ್‌ನಲ್ಲಿ ಬಂದು ನಂತರ ಮಂತ್ರಾಲಯ- ಗೋಕರ್ಣ ಬಸ್‌ ಹತ್ತಿ ಭಟ್ಕಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದೆ ಎಂದು ವರದಿ ತಿಳಿಸಿದೆ. ಈ ವಿಚಾರ ತಿಳಿಯುತ್ತಿದ್ದಂತೆ ರಾಷ್ಟ್ರೀಯ ತನಿಖಾ ದಳ (NIA) ಬಳ್ಳಾರಿ ಮತ್ತು ತುಮಕೂರು ಬಸ್‌ ನಿಲ್ದಾಣಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದೆ. ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಎನ್‌ಐಎ ತಂಡ ಮಾಹಿತಿ ಪಡೆದಿದ್ದು ಬಳ್ಳಾರಿ ಮತ್ತು ತುಮಕೂರು ಪೊಲೀಸರು ಸಹಕಾರ ನೀಡಿದ್ದಾರೆ. ಬೆಂಗಳೂರಿಂದ ಎರಡು ಕಾರುಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ತೆರಳಿ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ (Reward) ಘೋಷಣೆ ಮಾಡಲಾಗಿದೆ. ಎನ್‌ಐಎ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದು, ಶಂಕಿತನ ಸುಳಿವು ನೀಡಿದವರ ಹೆಸರು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ. ಇಲ್ಲಿಯವರೆಗೆ ಆರೋಪಿ ಚಹರೆ ಕಾಣುವ ಫೋಟೋ ಇರಲಿಲ್ಲ. ಎನ್‌ಐಎ ಬಿಡುಗಡೆ ಮಾಡಿರುವ ಫೋಟೋದಲ್ಲಿ ಅಲ್ಪ ಸ್ವಲ್ಪ ಮುಖ ಕಾಣಿಸುತ್ತದೆ ಮತ್ತು ಕೈ ಬರಹದ ಚಿತ್ರವನ್ನೂ ಕೂಡ ಬಿಡುಗಡೆ ಮಾಡಲಾಗಿದೆ.

Related posts

ಕಾಣಿಕೆ ಪೆಟ್ಟಿಗೆ ಸರ್ಕಾರಕ್ಕೆ ಸೇರಿದ್ದು..! ದೇವಸ್ಥಾನದ ಹುಂಡಿಯಲ್ಲಿ ಏನಿದು ವಿವಾದಾತ್ಮಕ ಬರಹ..?

ಒಂದೇ ಕುಟುಂಬದ ತಾಯಿ ಮಕ್ಕಳ ಭೀಕರ ಹತ್ಯೆ, ಚೂರಿಯಿಂದ ಚುಚ್ಚಿ ಅಪರಿಚಿತ ಪರಾರಿ

ಗೋಕರ್ಣಕ್ಕೆ ಹೊರಟಿದ್ದ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿ..! ಮೂವರು ಸ್ಥಳದಲ್ಲೇ ಸಾವು, 38 ಮಂದಿ ಆಸ್ಪತ್ರೆಗೆ ದಾಖಲು