Latestಕ್ರೈಂಬೆಂಗಳೂರುವೈರಲ್ ನ್ಯೂಸ್

ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ..! ಪ್ರಕರಣದಲ್ಲಿ ಐಪಿಎಸ್ ಅಧಿಕಾರಿಯೂ ಶಾಮೀಲು..?

768
Spread the love

ನ್ಯೂಸ್ ನಾಟೌಟ್: ನಟಿ ರನ್ಯಾ ರಾವ್ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ಇದೀಗ ಆಕೆಯ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಗೂ ಸಂಕಷ್ಟ ಎದುರಾಗಿದೆ. ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಮಂಗಳವಾರ(ಮಾ.11) ಆದೇಶಿಸಿದೆ.

ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ಒಂದು ವಾರದ ಒಳಗೆ ತನಿಖೆ ನಡೆಸಲು ಸೂಚಿಸಲಾಗಿದೆ.

ಇದನ್ನೂ ಓದಿ:ವಿಶ್ವದ ಟಾಪ್ 20 ಅತ್ಯಂತ ಹೆಚ್ಚು ಮಾಲಿನ್ಯ ನಗರಗಳಲ್ಲಿ ಭಾರತದ 13 ನಗರಗಳು ಸೇರ್ಪಡೆ..! ಯಾವುವು ಆ ನಗರಗಳು..?

ನಟಿ ರನ್ಯಾ ಚಿನ್ನ ಸಾಗಾಟ ಮಾಡುವಾಗ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಹೆಸರು ಬಳಸಿದ್ದರು. ಹೀಗಾಗಿ ಶಿಷ್ಟಾಚಾರದ ಸೌಲಭ್ಯ ಪಡೆಯಲು ಕಾರಣವಾದ ಸಂಗತಿಗಳು ಯಾವುವು? ಕೇಸ್​​ನಲ್ಲಿ ರಾಮಚಂದ್ರರಾವ್ ಪಾತ್ರ ಏನೇನಿದೆ ಎಂಬ ಬಗ್ಗೆ ತನಿಖೆ ನಡೆಸಲು ಅಧಿಕಾರಿ ನೇಮಿಸಲಾಗಿದೆ. ಇವರ ಬಗ್ಗೆ ತಕ್ಷಣ ತನಿಖೆ ಪ್ರಾರಂಭಿಸಿ ಒಂದು ವಾರದಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ.
ಪ್ರಕರಣ ಸಂಬಂಧ ಉದ್ಯಮಿ ಪುತ್ರ ತರುಣ್ ರಾಜು ಎಂಬವರನ್ನು ಡಿಆರ್​​ಐ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ತನಿಖೆ ಚುರುಕುಗೊಂಡಿದೆ.

See also  ವ್ಹೀಲ್ ಚೇರ್​ನಲ್ಲಿ ಕರ್ನಾಟಕದಿಂದ ಅಯೋಧ್ಯೆಗೆ ಹೊರಟ ಈ ಭಕ್ತ ಯಾರು? ​​ ಮಗನನ್ನು ಕಳೆದುಕೊಂಡ ಈತ ಈ ನಿರ್ಧಾರ ಮಾಡಿದ್ದೇಕೆ?
  Ad Widget   Ad Widget   Ad Widget   Ad Widget   Ad Widget   Ad Widget