ನ್ಯೂಸ್ ನಾಟೌಟ್ : ಕಿರಿಕ್ ಬೆಡಗಿ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ನ್ಯಶನಲ್ ಕ್ರಶ್ ದಿ ಮೋಸ್ಟ್ ಬ್ಯುಸಿಯೆಸ್ಟ್ ನಟಿಯರಲ್ಲಿ ಒಬ್ಬರು. ಅವಕಾಶಗಳ ಸುರಿಮಳೆಯೇ ಹರಿದು ಬರುತ್ತಿದೆ. ಸದ್ಯ ರಶ್ಮಿಕಾ ನಟನೆಯ ಛಾವಾ ಸಿನಿಮಾ ಫೆಬ್ರವರಿ 14ರಂದು ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ.
ಆದರೆ, ರಶ್ಮಿಕಾ ಮಂದಣ್ಣ ಅವರು ನಮ್ಮ ಕನ್ನಡ ನಾಡನ್ನು ಮರೆತಂತೆ ಭಾಸವಾಗುತ್ತಿದೆ ಎಂದು ಕೆಲವರು ಆಕ್ರೋಶ ಹೊರ ಹಾಕಿದ್ದಾರೆ. ಚಿತ್ರದ ಪ್ರಮೋಷನ್ ವೇಳೆ ನಟಿ ರಶ್ಮಿಕಾ ಮಂದಣ್ಣ ನೀಡಿರುವ ಒಂದು ಹೇಳಿಕೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ರಶ್ಮಿಕಾ ಮಂದಣ್ಣ ಹುಟ್ಟೂರನ್ನೇ ಮರೆತರಾ ಎಂಬ ಪ್ರಶ್ನೆ ಮೂಡಿದೆ.
ಅಷ್ಟಕ್ಕೂ ಅವರೇನು ಹೇಳಿದ್ರು , ಈ ರೀತಿ ಕನ್ನಡಿಗರು ಆಕ್ರೋಶವಾಗೋದಕ್ಕೆ ಕಾರಣಗಳೇನು? ಹೌದು,ವಿಕ್ಕಿ ಕೌಶಲ್, ರಶ್ಮಿಕಾ ಮಂದಣ್ಣ ಜತೆಯಾಗಿ ನಟಿಸಿರುವ ಐತಿಹಾಸಿಕ ಕಥಾಹಂದರವುಳ್ಳ ಸಿನಿಮಾ ಛಾವಾ ವಿಶ್ವದಾದ್ಯಂತ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಬಿಡುಗಡೆಗೂ ಮುನ್ನ ಚಿತ್ರತಂಡ ಕಾರ್ಯಕ್ರಮ ಒಂದನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಟಿ ರಶ್ಮಿಕಾ ಮಂದಣ್ಣ ನಾನು ಹೈದರಾಬಾದ್‌ನವಳು ಎಂದು ಹೇಳಿಕೊಳ್ಳುವ ಮೂಲಕ ಮತ್ತೊಮ್ಮೆ ಟ್ರೋಲ್ ಪೇಜ್ಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸಿನಿ ರಂಗವನ್ನು ಪ್ರವೇಶ ಮಾಡಿದ್ದ ರಶ್ಮಿಕಾ ಈ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಟಿ ರಶ್ಮಿಕಾ ಮಂದಣ್ಣ, ನಾನು ಹೈದರಾಬಾದ್‌ನವಳು. ನಾನು ಒಬ್ಬಳೇ ಇಲ್ಲಿಗೆ ಬಂದಿದ್ದೇನೆ. ಇವತ್ತು ನಿಮ್ಮ ಕುಟುಂಬಕ್ಕೆ ಸೇರಿದ್ದೇನೆ ಎಂದು ಭಾವಿಸುತ್ತೇನೆ ಎಂದು ಹೇಳಿದ್ದರು. ಈ ವಿಡಿಯೋ ಇದೀಗ ಜಾಲತಾಣದಲ್ಲಿ ವೈರಲ್ ಆಗಿದ್ದು, ಕನ್ನಡದ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋಗೆ ಕಮೆಂಟ್ಗಳ ಮಹಾಪೂರವೇ ಹರಿದುಬರುತ್ತಿದೆ.