ಕೊಡಗು

ಕೊಡಗಿನ ಚೆಲ್ವೆ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಡೀಪ್​ಫೇಕ್​ ವಿಡಿಯೋ ಪ್ರಕರಣ,FIR ದಾಖಲಿಸಿಕೊಂಡ ದೆಹಲಿ ಪೊಲೀಸರು ಹೇಳಿದ್ದೇನು?

ನ್ಯೂಸ್ ನಾಟೌಟ್ : ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ಫೇಕ್​ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮಾತ್ರವಲ್ಲ ಭಾರಿ ಚರ್ಚೆಗೂ ಕಾರಣವಾಗಿತ್ತು.ಈ ಬಗ್ಗೆ ಸಿನಿಮಾ ಸೇರಿದಂತೆ ಹಲವು ಕ್ಷೇತ್ರದ ಗಣ್ಯರು ಖಂಡಿಸಿದ್ದಾರೆ.ಇದೀಗ ಇದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.

ಎಐ ತಂತ್ರಜ್ಞಾನ ಬಳಸಿ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ಫೇಕ್​ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬೆನ್ನಲ್ಲೇ ಸಿನಿಮಾ ಕ್ಷೇತ್ರ ಸೇರಿದಂತೆ ವಿವಿಧ ಗಣ್ಯರು ಇದನ್ನು ವಿರೋಧಿಸಿದ್ದರು. ಈ ವೈರಲ್ ವಿಡಿಯೋ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು.

ಇದೀಗ ಡೀಪ್​ಫೇಕ್​ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ದಂಡ ಸಂಹಿತೆ (IPC Section) 465, 469, ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 66C ಮತ್ತು 66E ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆ ಮಾಡಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಇದು ನಿಜವಾಗಿಯೂ ಆಘಾತಕಾರಿ ವಿಚಾರವಾಗಿದ್ದು, ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದರು.ಇದರ ಬೆನ್ನಲ್ಲೇ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ ಡೀಪ್​ಫೇಕ್​ ವಿಡಿಯೋ ಮಾಡುವವರಿಗೆ 3 ಲಕ್ಷ ರೂಪಾಯಿ ದಂಡ ಮತ್ತು 1 ವರ್ಷ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಸಿದೆ.

Related posts

ಉಪ್ಪಿನಂಗಡಿ: ತಾಯಿ ಸಾವನ್ನಪ್ಪಿದ ಬೆನ್ನಲ್ಲೇ ಹಸುಗೂಸು ಮೃತ್ಯು, ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಇಹಲೋಕ ತ್ಯಜಿಸಿದ್ದ ತಾಯಿ, ಅನಾಥರಾದ ಇಬ್ಬರು ಮಕ್ಕಳು

ಮಡಿಕೇರಿ:ಭಧ್ರಕಾಳಿ ಮಾತೆಗೆ ವಿಶೇಷ ಹರಕೆ,ಬೇಡಿಕೆ ಈಡೇರಿದರೆ ಮಗಳನ್ನು ಮಧುಮಗನಂತೆ,ಮಗನನ್ನು ಮಧುಮಗಳಂತೆ ಸಿಂಗರಿಸಬೇಕು

ಕೊಡಗು: ವ್ಯಾಪಾರಿ ಮೇಲೆ ಗುಂಡಿನ ದಾಳಿ! ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ